Thursday, May 2, 2024
Homeಕರಾವಳಿಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ತೀವ್ರ ಬಿರುಸು ಪಡೆದ ಮುಂಗಾರು; ಮಳೆಯ ಅವಾಂತರಕ್ಕೆ ವಿದ್ಯಾರ್ಥಿ...

ಕರಾವಳಿ ಸೇರಿದಂತೆ 6 ಜಿಲ್ಲೆಗಳಲ್ಲಿ ತೀವ್ರ ಬಿರುಸು ಪಡೆದ ಮುಂಗಾರು; ಮಳೆಯ ಅವಾಂತರಕ್ಕೆ ವಿದ್ಯಾರ್ಥಿ ಸೇರಿದಂತೆ ಇಬ್ಬರು ಬಲಿ

spot_img
- Advertisement -
- Advertisement -
ಬೆಂಗಳೂರು; ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯ ಅಬ್ಬರ ಜೋರಾಗಿದ್ದು, ಮುಂಗಾರು ತೀವ್ರ ಬಿರುಸಾಗಿದೆ. 

ಇನ್ನೂ ಮಳೆ ಸಂಬಂಧಿತ ಹವಾಂತರಕ್ಕೆ ಇಬ್ಬರು ಬಲಿಯಾಗಿದ್ದು, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹಲ್ತೂರಿನಲ್ಲಿ ಕೃಷಿ ಗದ್ದೆಯಲ್ಲಿ ಕೃಷಿಕ ಮಹಿಳೆ ಲಕ್ಷ್ಮೀ ಪೂಜಾರ್ತಿ(66)ಮತ್ತು ಚಿಕ್ಕಮಗಳೂರು ಜಿಲ್ಲೆಯ ಹೊಸಪೇಟೆಯಲ್ಲಿ ಸುಪ್ರೀತಾ ಎಂಬ ಬಾಲಕಿ ಶಾಲೆಯಿಂದ ವಾಪಸ್‌ ಮನೆಗೆ ತೆರಳುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದಾಳೆ ಎನ್ನಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದೀಪುರದಲ್ಲಿ ಮನೆಯೊಂದರ ಮೇಲೆ ಬೃಹತ್‌ ಮರ ಉರುಳಿಬಿದ್ದು ಮನೆಯಲ್ಲಿದ್ದ ಆರು ಮಂದಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರಿನಲ್ಲಿಯೂ ಮಳೆಯ ಅಬ್ಬರ ಹೆಚ್ಚಿದೆ. ಭದ್ರಾವತಿ ನದಿಯೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾದ್ಯಂತ ಭಾನುವಾರ ರಾತ್ರಿಯಿಂದೀಚೆಗೆ ಮಳೆ ಬಿರುಸುಗೊಂಡಿದ್ದು ನೇತ್ರಾವತಿ, ಕುಮಾರಧಾರಾ ಸೇರಿದಂತೆ ಎಲ್ಲ ನದಿಗಳಲ್ಲಿ ನೀರಿನ ಮಟ್ಟದಿಢೀರನೆ ಏರಿಕೆಯಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿ ಪ್ರವಾಹದ ಮಟ್ಟದಲ್ಲಿ ಹರಿಯುತ್ತಿದ್ದು ಕ್ಷೇತ್ರದ ಸ್ನಾನಘಟ್ಟ ಮುಳುಗಡೆಯಾಗಿದೆ. ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರಿದಿದ್ದು ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟಮತ್ತಷ್ಟು‌ ಏರಿಕೆಯಾಗಿದೆ. ಪರಿಣಾಮವಾಗಿ ಭಾಗಮಂಡಲ-ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದ್ದು ರಸ್ತೆ ಸಂಚಾರ ಕಡಿತಗೊಂಡಿದೆ. ಮಡಿಕೇರಿ-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ, ಕುಸಿಯುವ ಆತಂಕ ಎದುರಾಗಿದೆ. ಈಗಾಗಲೇ ಮಡಿಕೇರಿ ಸಮೀಪದ ತಾಳತ್ತಮನೆ ವ್ಯಾಪ್ತಿಯಲ್ಲಿ 30 ಅಡಿ ಎತ್ತರ ಗುಡ್ಡೆ ಕುಸಿತವಾಗಿದ್ದು, ಸಣ್ಣ ಪ್ರಮಾಣದ ಮಣ್ಣು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.

- Advertisement -
spot_img

Latest News

error: Content is protected !!