ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮುಖದಲ್ಲಿ 6 ಜನ ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾಗೆ ಸಂಜೆ.6 ಗಂಟೆಗೆ ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಗೂ ಬೇಕಿದ್ದ ಮೋಸ್ಟ್ ವಾಂಟೆಂಡ್ 6 ನಕ್ಸಲರು ಆಗಮಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿದಂತ ನಕ್ಸಲರು, ಆ ಬಳಿಕ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಸಿಎಂ ಸಿದ್ದರಾಮಯ್ಯ ಅವರು ಶರಣಾಗತಿಯಾದಂತ 6 ನಕ್ಸಲರಿಗೆ ಹೂ ಗುಚ್ಚ ನೀಡಿ, ಸಮಾಜ ಮುಖ್ಯವಾಹಿನಿಗೆ ಬರ ಮಾಡಿಕೊಂಡರು.
ಇದೇ ವೇಳೆ ರಾಜ್ಯ ಸರ್ಕಾರದಿಂದ ಶರಣಾಗಿಯಾದಂತ 6 ನಕ್ಸಲರಿಗೆ ಪ್ಯಾಕೇಜ್ ಘೋಷಣೆ ಮಾಡಿದೆ. ಮೂರು ಕೆಟಗರಿಯಲ್ಲಿ ಪ್ಯಾಕೇಜ್ ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ಕೆಟಗರಿ ಎ ವರ್ಗದಡಿ ನಮ್ಮ ರಾಜ್ಯದವರೇ ಆಗಿದ್ದು, ನಕ್ಸಲ್ ಚಟುವಟಿಕೆಯಲ್ಲಿ ತೊಡಗಿ, ಪೇಸ್ ಇದ್ದು ಶರಣಾದವರಿಗೆ 7.50 ಲಕ್ಷ ಹಣ ನೀಡುತ್ತಿದೆ.

ಇನ್ನು ಶರಣಾದ ನಕ್ಸಲರಿಗೆ ಮೊದಲು ಅವರ ಕುಟುಂಬದವರನ್ನು ಭೇಟಿ ಮಾಡಿಸಿ ಮಾತಾನಾಡಲು ಅವಕಾಶ ನೀಡಿದ್ದಾರೆ. ಬಳಿಕ ಮೆಡಿಕಲ್ ಚೆಕ್ ಮಾಡಿಸಿ, ಚಿಕ್ಕಮಗಳೂರು ಎಸ್ಪಿ ಮತ್ತು ಡಿಸಿ ಅವರನ್ನು ಮಾತಾನಾಡಿಸಲಿದ್ದಾರೆ. ಶರಣಾಗತಿ ಬಗ್ಗೆ ಕೆಲ ದಾಖಲೆಗಳಿಗೆ ಮಾಹಿತಿ ನೀಡಿ ಆರು ಜನ ನಕ್ಸಲ್ ಸದಸ್ಯರು ಸಹಿ ಮಾಡಲಿದ್ದಾರೆ. ಚಿಕ್ಕಮಗಳೂರು ಪೊಲೀಸರು ರಾತ್ರಿಯೇ ಬೆಂಗಳೂರು ಕೋರ್ಟ್ ಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಿದ್ದಾರೆ. ಕೋರ್ಟ್ ಗೆ ಕರೆದುಕೊಂಡು ಹೋಗುವವರೆಗೆ ಇವರ ಜೊತೆ ಶರಣಾಗತಿ ಸಮಿತಿ ಸದಸ್ಯರು ಉಪಸ್ಥಿತಿ ಇರಲಿದ್ದಾರೆ.


