Thursday, June 4, 2026
Homeತಾಜಾ ಸುದ್ದಿಹಾಸನ: ದೋಣಿಗಾಲ್ ಮತ್ತು ಮಾರನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ಲೋಪ: 6 ಮಂದಿ ಪೊಲೀಸ್ ಸಿಬ್ಬಂದಿಯ ಅಮಾನತು

ಹಾಸನ: ದೋಣಿಗಾಲ್ ಮತ್ತು ಮಾರನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ಲೋಪ: 6 ಮಂದಿ ಪೊಲೀಸ್ ಸಿಬ್ಬಂದಿಯ ಅಮಾನತು

- Advertisement -
- Advertisement -

ಹಾಸನ: ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಮಾರನಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದ 6 ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪ ಎಸೆಗಿದ ಹಿನ್ನೆಲೆ ಅಮಾನತು ಮಾಡಿ ಪೊಲೀಸರು ಎಂದು ತಿಳಿದು ಬಂದಿದೆ. ಹಾಸನ ಎಸ್‌ಪಿ ಹರಿರಾಂ ಶಂಕರ್ ಅಮಾನತು ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆ ಕಾರಣದಿಂದ ಎರಡು ಕಡೆ ಭೂಕುಸಿತ ಹಾಗೂ ರಸ್ತೆ ಕುಸಿತದಿಂದ ಶಿರಾಡಿ ಘಾಟ್ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿತ್ತು. ಸಂಜೆ 6ರಿಂದ ಬೆಳಗ್ಗೆ 6 ಗಂಟೆವರೆಗೆ ತುರ್ತು ವಾಹನಗಳನ್ನು ಬಿಟ್ಟು ಎಲ್ಲ ತರಹದ ವಾಹನಗಳ ಸಂಚಾರ ಬಂದ್ ಮಾಡಲಾಗಿತ್ತು.

ಆದರೆ, ಶಿರಾಡಿ ಘಾಟ್‌ ರಸ್ತೆ ಚೆಕ್‌ಪೋಸ್ಟ್‌ನಲ್ಲಿ ಸಕಲೇಶಪುರ ಗ್ರಾಮಾಂತರ ಠಾಣೆಯ 6 ಪೊಲೀಸ್ ಸಿಬ್ಬಂದಿ ಕರ್ತವ್ಯ ಲೋಪ ಎಸೆಗಿದ್ದರು ಎನ್ನಲಾಗಿತ್ತು.

- Advertisement -

Latest News

error: Content is protected !!