Friday, March 29, 2024
Homeತಾಜಾ ಸುದ್ದಿಜಮ್ಮು ಮತ್ತು ಕಾಶ್ಮೀರದಲ್ಲಿ ನದಿಗೆ ಉರುಳಿದ ಭದ್ರತಾ ಸಿಬ್ಬಂದಿಯನ್ನು ಕರೆಯೊಯ್ಯುತ್ತಿದ್ದ ಬಸ್: 6 ಯೋಧರು‌ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದಲ್ಲಿ ನದಿಗೆ ಉರುಳಿದ ಭದ್ರತಾ ಸಿಬ್ಬಂದಿಯನ್ನು ಕರೆಯೊಯ್ಯುತ್ತಿದ್ದ ಬಸ್: 6 ಯೋಧರು‌ ಹುತಾತ್ಮ

spot_img
- Advertisement -
- Advertisement -

ಶ್ರೀನಗರ:  ಜಮ್ಮು ಮತ್ತು ಕಾಶ್ಮೀರದಲ್ಲಿ 39 ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಆರು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಇನ್ನೂ ಹಲವಾರು ಸಿಬ್ಬಂದಿ ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಶ್ರೀನಗರದ ಸೇನಾ ಆಸ್ಪತ್ರೆಗೆ ಸಾಗಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

37 ಐಟಿಬಿಪಿ ಸಿಬ್ಬಂದಿ ಮತ್ತು ಇಬ್ಬರು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ನದಿ ಪಾತ್ರಕ್ಕೆ ಬಿದ್ದಿದೆ.

ಬಸ್‌ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯಿಂದ ನದಿಗೆ ಬಿದ್ದಿದೆ. ಭದ್ರತಾ ಪಡೆಗಳು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು ಎಂದು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್  ತಿಳಿಸಿದ್ದಾರೆ.

ಅಮರನಾಥ ಯಾತ್ರೆಗಾಗಿ ಈ ಪ್ರದೇಶದಲ್ಲಿ ಯೋಧರನ್ನು ನಿಯೋಜಿಸಲಾಗಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.

- Advertisement -
spot_img

Latest News

error: Content is protected !!