Monday, May 6, 2024
Homeತಾಜಾ ಸುದ್ದಿ6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಸರ್ಕಾರದ ಗ್ರೀನ್ ಸಿಗ್ನಲ್ : ಫೆಬ್ರವರಿ...

6-8ನೇ ತರಗತಿಗಳಿಗೆ ಪೂರ್ಣ ಪ್ರಮಾಣದ ಕ್ಲಾಸ್ ಗೆ ಸರ್ಕಾರದ ಗ್ರೀನ್ ಸಿಗ್ನಲ್ : ಫೆಬ್ರವರಿ 22ರಿಂದ ಶಾಲೆಗಳ ಆರಂಭ

spot_img
- Advertisement -
- Advertisement -

ಬೆಂಗಳೂರು: ಬರೋಬ್ಬರಿ ಒಂದು ವರ್ಷದ ಬಳಿಕ ಪೂರ್ಣ ಪ್ರಮಾಣದ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಈ ಹಿನ್ನೆಲೆಯಲ್ಲಿ ಫೆ.22ರಿಂದ 1-5ನೇ ತರಗತಿವರೆಗೆ ವಿದ್ಯಾಗಮ ಶಾಲೆಗಳು ಆರಂಭವಾಗಲಿದೆ. ವಿದ್ಯಾಗಮ ನೋಡಿಕೊಂಡು ಶೀಘ್ರದಲ್ಲೇ ಪುರ್ಣ ಪ್ರಮಾಣದಲ್ಲಿ ಶಾಲೆ ಆರಂಭಕ್ಕೆ ಒಪ್ಪಿಗೆ ಸೂಚಿಸಲಾಗಿದೆ.

ಇನ್ನು ಫೆ.22ರಿಂದ 6-8ನೇ ತರಗತಿವರೆಗೆ ಭೌತಿಕ ತರಗತಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುತ್ತಿದೆ. ಈ ಮೂಲಕ ವರ್ಷದ ಬಳಿಕ ರಾಜ್ಯದಲ್ಲಿ ಮತ್ತೆ ಶಾಲೆಗಳು ಪುನರಾರಂಭವಾಗುತ್ತಿದೆ.

- Advertisement -
spot_img

Latest News

error: Content is protected !!