Sunday, June 7, 2026
Homeಕರಾವಳಿಬಂಟ್ವಾಳ: ತೀವ್ರ ಜ್ವರಕ್ಕೆ 6 ವರ್ಷದ ಬಾಲಕಿ ಬಲಿ

ಬಂಟ್ವಾಳ: ತೀವ್ರ ಜ್ವರಕ್ಕೆ 6 ವರ್ಷದ ಬಾಲಕಿ ಬಲಿ

- Advertisement -
- Advertisement -

ಬಂಟ್ವಾಳ: ತೀವ್ರವಾದ ಜ್ವರಕ್ಕೆ ಆರು ವರ್ಷದ ಬಾಲಕಿ ಬಲಿಯಾಗಿರುವ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆದಿದೆ.

ಕಲ್ಲಡ್ಕದ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ (6) ಮೃತ ಬಾಲಕಿ. ಈಕೆ ಮಾಣಿಯ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದಳು.

ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು. ‌ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಹೆಚ್ಚಳವಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ.

- Advertisement -

Latest News

error: Content is protected !!