ಕೊಲಂಬೋ: ಶ್ರೀಲಂಕಾದಲ್ಲಿ ನಡೆದ 35ನೇ ವಾರ್ಷಿಕ ಮಾಸ್ಟರ್ಸ್ (ಒಪನ್) ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆಲ್ಲುವುದರೊಂದಿಗೆ ಮಂಗಳೂರಿನ 64 ವರ್ಷದ ಮಹಿಳಾ ಕ್ರೀಡಾಪಟು ಭವಾನಿ ಜೋಗಿ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಇವರು ಇದುವರೆಗೆ ಫೀಲ್ಡ್ ಮತ್ತು ಟ್ರ್ಯಾಕ್ ಸ್ಪರ್ಧೆಗಳಲ್ಲಿ 200ಕ್ಕೂ ಅಧಿಕ ಪದಕಗಳನ್ನು ಗೆದಿದ್ದಾರೆ. ವೃತ್ತಿಯಲ್ಲಿ ನರ್ಸ್ ಆಗಿರುವ ಭವಾನಿ ಮೂಲತ: ಹಾಸನ ಜಿಲ್ಲೆ ಸಕಲೇಶಪುರದವರಾಗಿದ್ದು, ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ.
1998ರ ನಂತರ ಒಪನ್ ಮಾಸ್ಟರ್ ನಲ್ಲಿ ಸ್ಪರ್ಧಿಸುತ್ತಿದ್ದು, ಈವರೆಗೂ 100 ಚಿನ್ನ, 70 ಬೆಳ್ಳಿ ಪದಕಗಳನ್ನು ಗೆದಿದ್ದಾರೆ. 2017ರಲ್ಲಿ ಮಂಗಳೂರಿನ ಸರ್ಕಾರಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಆಗಿ ನಿವೃತ್ತಿಯಾದ ನಂತರ ಭವಾನಿ, ಮೈಸೂರಿಗೆ ಸ್ಥಳಾಂತರವಾಗಿದ್ದರು.
ಎರಡು ವರ್ಷದ ನಂತರ ಮಂಗಳೂರಿಗೆ ಅವರು ಮತ್ತೆ ಮರಳಿ, ಲೇಡಿ ಹಿಲ್ ನಲ್ಲಿ ವಾಸಿಸುತ್ತಿದ್ದಾರೆ. ಕ್ರೀಡೆಗಳನ್ನು ಭಾಗವಹಿಸುವುದನ್ನು ಮುಂದುವರೆಸುತ್ತೇನೆ. ಚಿನ್ನ ಗೆಲಲ್ಲು ಪ್ರಯತ್ನಿಸುತ್ತೇನೆ. ಇದಕ್ಕೆ ವಿರಾಮವೇ ಇಲ್ಲ ಎನ್ನುತ್ತಾರೆ ಭವಾನಿ ಜೋಗಿ.
