Friday, June 5, 2026
Homeಕರಾವಳಿಮಂಗಳೂರುಮಂಗಳೂರು; 10 ದಿನಗಳ ಅಂತರದಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವು

ಮಂಗಳೂರು; 10 ದಿನಗಳ ಅಂತರದಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವು

- Advertisement -
- Advertisement -

ಮಂಗಳೂರು; 10 ದಿನಗಳ ಅಂತರದಲ್ಲಿ 7 ದನಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನೀರುಮಾರ್ಗದ ಕೆಲರಾಯಿ ಚರ್ಚ್ ಬಳಿಯ ನಿವಾಸಿ ಜೋಸೆಫ್ ಸ್ಟಾ ನಿ ಪ್ರಕಾಶ್ ಎಂಬವರ ಮನೆಯಲ್ಲಿ ನಡೆದಿದೆ.


ಸುಮಾರು 50 ವರ್ಷಗಳಿಂದ ಹೈನುಗಾರಿಕೆ ನಡೆಸುತ್ತಿರುವ ಜೋಸೆಫ್ ಸ್ಟಾನಿ ಅವರಲ್ಲಿ ಸುಮಾರು 30ಕ್ಕೂ ಅಧಿಕ ಜಾನುವಾರುಗಳಿದ್ದು, ಪ್ರತಿನಿತ್ಯ ನೀರುಮಾರ್ಗ- ಕೆಲರಾಯಿ ಕಡೆಗೆ ದನಗಳನ್ನು ಮೇಯಲು ಬಿಡುತ್ತಿದ್ದರು. ಇದೇ ಮೊದಲ ಬಾರಿಗೆ ಮೇಯಲು ಹೋದ ದನಗಳು ಮನೆಗೆ ಬಂದ ಬಳಿಕ ಒಂದೊಂದೇ ದನಗಳು ನಿತ್ರಾಣಗೊಂಡು ಸಾವನಪ್ಪಿದೆ. ದನಗಳಿಗೆ ಯಾರೋ ವಿಷ ಪದಾರ್ಥ ನೀಡಿ ಸಾಯಿಸಿರುವ ಬಗ್ಗೆ ಅನುಮಾನವಿದೆ.

ಜೂನ್ 12 ರಂದು ಒಂದು ದನ ಸಾವನ್ನಪ್ಪಿದೆ. 13 ರಂದು ಪಶುವೈದ್ಯರು ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದಾರೆ. ಆರು ದನಗಳು ಮನೆಯಲ್ಲಿಯೇ ಸಾವನ್ನಪ್ಪಿದ್ದು, ಒಂದು ದನ ಮೇಯಲು ಬಿಟ್ಟಲ್ಲಿ ಗುಡ್ಡದಲ್ಲಿಯೇ ಮೃತಪಟ್ಟಿದೆ. ಇನ್ನು ಒಂದು ಜೀವನ್ಮರಣ ಸ್ಥಿತಿಯಲ್ಲಿದೆ. ಸ್ಥಳೀಯವಾಗಿ ಇನ್ನೂ ಕೆಲವರು ದನಗಳನ್ನು ಮೇಯಲು ಬಿಡುತ್ತಿದ್ದಾರೆ. ಆದರೆ ಅವರಿಗೆ ಆ ದನಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದರು.ಘಟನೆಯ ಬಗ್ಗೆ ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ

- Advertisement -

Latest News

error: Content is protected !!