Wednesday, May 15, 2024
Homeಕರಾವಳಿಉಡುಪಿಕೃಷಿ ಪಂಪ್ ಸೆಟ್ ಗಳಿಗೆ ಹಗಲು 7 ಗಂಟೆ ಕಾಲ ನಿರಂತರ ವಿದ್ಯುತ್: ಸಚಿವ...

ಕೃಷಿ ಪಂಪ್ ಸೆಟ್ ಗಳಿಗೆ ಹಗಲು 7 ಗಂಟೆ ಕಾಲ ನಿರಂತರ ವಿದ್ಯುತ್: ಸಚಿವ ಸುನೀಲ್ ಕುಮಾರ್

spot_img
- Advertisement -
- Advertisement -

ಬೆಂಗಳೂರು : ಕೃಷಿ ಪಂಪಸೆಟ್ ಫೀಡರ್ ಗಳಿಗೆ ಹಗಲು ವೇಳೆ ನಿರಂತರ ಏಳು ಗಂಟೆಗಳ ಕಾಲ ಮೂರು ಫೇಸ್  ಹಾಗೂ ಗೃಹ ಬಳಕೆ ವಿದ್ಯುತ್  ಪೂರೈಕೆ ಮಾಡುವಲ್ಲಿ ಆಗುವ ವ್ಯತ್ಯಯಗಳಿಗೆ ವಲಯ ಮುಖ್ಯ ಎಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಬೇಸಿಗೆ ಕಾಲದಲ್ಲಿ ಮೂರು ತಿಂಗಳು ಕಾಲ  ಗೃಹ ಬಳಕೆ, ವಾಣಿಜ್ಯ ಬಳಕೆ, ಕೈಗಾರಿಕೆ ಬಳಕೆ ಹಾಗೂ ಕೃಷಿ ಪಂಪ್ ಸೆಟ್ ವಿದ್ಯುತ್ ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲಾ ಎಸ್ಕಾಂ‌ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ಅವರು ಸಮಸ್ಯೆಗಳಿಗೆ ವಲಯ ಮುಖ್ಯ ಎಂಜಿನಿಯರ್ ಗಳನ್ನು ಹೊಣೆ ಮಾಡಲಾಗುವುದು, ಹೀಗಾಗಿ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಅಲ್ಲದೇ ಎಲ್ಲಾ ಎಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಆಗುವ ತಾಂತ್ರಿಕ ಹಾಗೂ ತಾಂತ್ರಿಕೇತರ ಸಮಸ್ಯೆಯಿಂದ ಆಗುವ ವಿದ್ಯುತ್ ಪೂರೈಕೆ ಸಮಸ್ಯೆ ಬಗ್ಗೆ ಪ್ರತಿ ದಿನ ಬೆಳಗ್ಗೆ ೧೧ ಗಂಟೆಯೊಳಗಾಗಿ ಮಾಹಿತಿ ಸಂಗ್ರಹಿಸಿ ಅದಕ್ಕೆ ಪರಿಹಾರ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕರಿಗೆ ವಿದ್ಯುತ್ ವ್ಯತ್ಯಯದಿಂದ ಆಗುವ ತೊಂದರೆಯನ್ನು ಕರ್ತವ್ಯ ಲೋಪ ಎಂದೇ ಪರಿಗಣಿಸಲಾಗುತ್ತದೆ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆ ವ್ಯಾಪ್ತಿಯಲ್ಲಿ ಕಾಫಿ ಬೆಳೆಗಾರರಿಗೆ ಹಾಗೂ ಇತರೆ ರೈತ ವರ್ಗಕ್ಕೆ ಅನುಕೂಲವಾಗುವಂತೆ ಪ್ರತಿ ದಿನ 12 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡುವುದಕ್ಕೆ ಸಭೆಯಲ್ಲಿ ಸಚಿವರು ಸ್ಪಷ್ಟ ಸೂಚನೆ ನೀಡಿದ್ದಾರೆ.
ಕಾಫಿ ಬೆಳೆಗಾರರಿಗೆ ಮುಂದಿನ ಮೂರು ತಿಂಗಳ ಅವಧಿಯಲ್ಲಿ ನಿರಂತರ ೧೨ ಗಂಟೆ ವಿದ್ಯುತ್ ಪೂರೈಕೆ ಅನಿವಾರ್ಯವಾಗಿದೆ ಎಂದು ರೈತರಿಂದ ಬೇಡಿಕೆ ವ್ಯಕ್ತವಾಗಿತ್ತು.

- Advertisement -
spot_img

Latest News

error: Content is protected !!