Tuesday, May 14, 2024
Homeತಾಜಾ ಸುದ್ದಿವಿಧಾನ ಪರಿಷತ್‌ ಚುನಾವಣೆಯಲ್ಲಿ 7 ಸದಸ್ಯರೂ ಅವಿರೋಧ ಆಯ್ಕೆ

ವಿಧಾನ ಪರಿಷತ್‌ ಚುನಾವಣೆಯಲ್ಲಿ 7 ಸದಸ್ಯರೂ ಅವಿರೋಧ ಆಯ್ಕೆ

spot_img
- Advertisement -
- Advertisement -

ಬೆಂಗಳೂರು : ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ ನ ಏಳು ಸ್ಥಾನಗಳ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 7 ಸ್ಥಾನಗಳ ಪೈಕಿ ಬಿಜೆಪಿಗೆ 4, ಕಾಂಗ್ರೆಸ್ ಗೆ 2 ಹಾಗೂ ಜೆಡಿಎಸ್ ಗೆ ಒಂದು ಸ್ಥಾನ ದಕ್ಕಿದೆ. ದಿನಾಂಕ 03-06-2022 ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ವಿಶಾಲಾಕ್ಷಿ ಅವರು ಇಂದು ಘೋಷಿಸಿದರು.

ಮೇ 24 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿತ್ತು, ಮೇ 25 ರಂದು ಪರಿಶೀಲನೆ ಹಾಗೂ ಮೇ 27 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಅಭ್ಯರ್ಥಿಗಳನ್ನ ಬಿಟ್ಟು ಬೇರೆ ಯಾರು ಸ್ಪರ್ಧೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಅಂತಿಮ ಕಣದಲ್ಲಿ ಉಳಿದಿದ್ದ ಕಾರಣಕ್ಕೆ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ, ಟಿ. ನಾರಾಯಣಸ್ವಾಮಿ, ಹೇಮಾಲತಾ ನಾಯಕ ಹಾಗೂ ಎಸ್. ಕೇಶವ ಪ್ರಸಾದ್ ಆಯ್ಕೆಯಾಗಿದ್ರೆ, ಕಾಂಗ್ರೆಸ್‌ನಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಂ. ನಾಗರಾಜ್ ಯಾದವ್ ಆಯ್ಕೆಯಾಗಿದ್ದಾರೆ. ಇನ್ನು ಒಂದು ಸ್ಥಾನಕ್ಕೆ ಜೆಡಿಎಸ್ ಪಕ್ಷದಿಂದ ಶರವಣನ್. ಟಿ ಅವರು ಅವಿರೋಧವಾಗಿ ವಿಧಾನಪರಿಷತ್‌ಗೆ ಆಯ್ಕೆಯಾದರು. ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಯ್ತು.

- Advertisement -
spot_img

Latest News

error: Content is protected !!