Saturday, June 6, 2026
Homeಕರಾವಳಿಉಡುಪಿಕುಂದಾಪುರದಲ್ಲಿ ಮನೆಗೆ ನುಗ್ಗಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

ಕುಂದಾಪುರದಲ್ಲಿ ಮನೆಗೆ ನುಗ್ಗಿ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

- Advertisement -
- Advertisement -

ಕುಂದಾಪುರ: ಮನೆಗೆ ನುಗ್ಗಿ ಪಾಪಿಯೊಬ್ಬ 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ. ಹನುಮಂತ ಬಂಧಿತ ಆರೋಪಿ.

ತೋಟದ ಕೆಲಸ ಮಾಡುತ್ತಿದ್ದ ಹನುಮಂತ ಜ.17ರಂದು ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ, ಲೈಂಗಿಕ ದೌಜರ್ನ್ಯ ಎಸಗಿರುವುದಾಗಿ ಆರೋಪಿಸಲಾಗಿದೆ.

ಜ.18ರಂದು ಪ್ರಕರಣ ದಾಖಲಾಗಿದ್ದು, ಅದೇ ದಿನ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಉಡುಪಿಯ ಪೋಕ್ಸೋ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!