Monday, May 20, 2024
Homeತಾಜಾ ಸುದ್ದಿಇಂಗ್ಲಿಷ್ ಓದಲು ಕಷ್ಟ ಎಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ

ಇಂಗ್ಲಿಷ್ ಓದಲು ಕಷ್ಟ ಎಂದು ಆತ್ಮಹತ್ಯೆಗೆ ಯತ್ನಿಸಿದ ಬಾಲಕ

spot_img
- Advertisement -
- Advertisement -

ತುಮಕೂರು:  ಇಂಗ್ಲಿಷ್ ಓದಲು ಕಷ್ಟವಾಗುತ್ತದೆ ಎಂದು ಬಾಲಕನೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಊರ್ಡಿಗೆರೆಯಲ್ಲಿ ನಡೆದಿದೆ.

ಊರ್ಡಿಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿರುವ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದು, ಆತ್ಮಹತ್ಯೆಗೆ  ಕಾರಣ ಇಂಗ್ಲಿಷ್ ಓದಲು ಕಷ್ಟವಾಗುತ್ತಿರುವುದು ಎಂದು ತಿಳಿದು ಬಂದಿದೆ. ಇಂಗ್ಲಿಷ್ ಕಲಿಕೆಯ ವಿಚಾರವಾಗಿ ಬಾಲಕ ಶಾಲೆಗೆ ಹೋಗುವುದಿಲ್ಲವೆಂದು ಹಠ ಮಾಡಿದ್ದನು. ಬಾಲಕನ ಮನವೊಲಿಸಿದ್ದ ಪೋಷಕರು ಶಾಲೆಗೆ ಕಳುಹಿಸಿದ್ದರು. ಆದರೆ ಧೃತಿಗೆಟ್ಟ ಬಾಲಕ ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ಯುವಕ ಅಸ್ವಸ್ಥನಾಗಿ ಮನೆಯಲ್ಲಿ ಕುಸಿದು ಬಿದ್ದಿದ್ದನು ಕಂಡು ಕೂಡಲೇ ಪೋಷಕರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ತುಮಕೂರಿನ ಕೋತಿತೋಪು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿದ್ದ ಬಾಲಕನಿಗೆ 7ನೇ ತರಗತಿಗೆ ಊರ್ಡಿಗೆರೆಯಲ್ಲಿ ಶಾಲೆಗೆ ಸೇರಿಸಲಾಗಿತ್ತು. ಮೇ 16ನೇ ತಾರೀಖಿನಿಂದ ತರಗತಿಗಳು ಶುರುವಾಗಿದ್ದು, ಬಾಲಕ ಒಂದೆರಡು ದಿನ ಶಾಲೆಗೆ ಸರಿಯಾಗಿ ಹೋಗಿದ್ದನು. ಬಳಿಕ ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡಿದ್ದಾನೆ. 

ತುಮಕೂರು ನಗರದ ಕೋತಿ ತೋಪು ಮೂಲದ ಸೋಮಶೇಖರ್, ಜಯಮ್ಮ ದಂಪತಿಯ ಮಗ ಇವನಾಗಿದ್ದು, ಕೂಲಿ ಕೆಲಸ ಮಾಡುತ್ತಾ ಜೀವನ ನಡೆಸುತ್ತಿರುವ ಸೋಮಶೇಖರ್‌ ದಂಪತಿ ಮಗನ ಕೃತ್ಯದಿಂದ ಕಂಗಲಾಗಿದ್ದಾರೆ.  

- Advertisement -
spot_img

Latest News

error: Content is protected !!