Wednesday, June 3, 2026
Homeಚಿಕ್ಕಮಗಳೂರುಚಿಕ್ಕಮಗಳೂರು; 7ನೇ ತರಗತಿ ಬಾಲಕಿ ಹೃದಯಾಘಾತದಿಂದ ನಿಧನ

ಚಿಕ್ಕಮಗಳೂರು; 7ನೇ ತರಗತಿ ಬಾಲಕಿ ಹೃದಯಾಘಾತದಿಂದ ನಿಧನ

- Advertisement -
- Advertisement -

ಚಿಕ್ಕಮಗಳೂರು; 7ನೇ ತರಗತಿ ಬಾಲಕಿ ಹೃದಯಾಘಾತದಿಂದ ನಿಧನವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ. ಸೃಷ್ಟಿ (13) ಮೃತ ವಿದ್ಯಾರ್ಥಿನಿ.

ಸೃಷ್ಟಿ ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ಕುಸಿದು ಬಿದ್ದಿದ್ದಳು.ಆಕೆಯನ್ನು ಆಸ್ಪತ್ರೆಗೆ ಸಾಗಿಸೋ ವೇಳೆ ಆಕೆ ಸಾವನ್ನಪ್ಪಿದ್ದಾಳೆ.ಆಕೆಯನ್ನು ಪರೀಕ್ಷಿಸಿದ ಮೂಡಿಗೆರೆ ಎಂ.ಜಿ.ಎಂ. ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದಾರೆ.

ದಾರದಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸೃಷ್ಟಿ ನಿಧನದಿಂದ ಆಕೆಯ ಕುಟುಂಬಸ್ಥರು ಆಘಾತಗೊಂಡಿದ್ದು, ಮನೆಯಲ್ಲಿ ನೀರವ ಮೌನ ಆವರಿಸಿದೆ,

- Advertisement -

Latest News

error: Content is protected !!