Thursday, May 16, 2024
Homeತಾಜಾ ಸುದ್ದಿಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 8 ಮಂದಿ ಶಾಸಕರು

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 8 ಮಂದಿ ಶಾಸಕರು

spot_img
- Advertisement -
- Advertisement -

ಬೆಂಗಳೂರು;  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಜೊತೆ ಇಂದು 8 ಮಂದಿ ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದರು.

ಸಿಎಂ, ಡಿಸಿಎಂ ಪ್ರಮಾಣವಚನದ ಬಳಿಕ ಕೊರಟಗೆರೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಡಾ.ಜಿ ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರ ಬಳಿಕ ಕೆಹೆಚ್ ಮುನಿಯಪ್ಪ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಬಳಿಕ ಕೆಜೆ ಜಾರ್ಜ್ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರೇ, ಶಾಸಕ ಎಂ.ಬಿ ಪಾಟೀಲ್ ಅವರು ಕೂಡ ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬುದ್ಧ ಬಸವನ ಹೆಸರಿನಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಶಾಸಕ ಪ್ರಿಯಾಂಕ್ ಖರ್ಗೆ ಅವರು ದೇವರ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇನ್ನು ರಾಮಲಿಂಗಾರೆಡ್ಡಿಯವರು ಇಂದು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಬಳಿಕ ಚಾಮರಾಜಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಂತ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾ ಹಾಗೂ ತಾಯಿಯ ಹೆಸರಿನಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

- Advertisement -
spot_img

Latest News

error: Content is protected !!