Saturday, June 6, 2026
Homeಕೊಡಗುಉಂಗುರ ನುಂಗಿ 8 ತಿಂಗಳ ಮಗು ಸಾವು

ಉಂಗುರ ನುಂಗಿ 8 ತಿಂಗಳ ಮಗು ಸಾವು

- Advertisement -
- Advertisement -

ಮ‌ಡಿಕೇರಿ;ಉಂಗುರ ನುಂಗಿ 8 ತಿಂಗಳ ಮಗು ಸಾವನ್ನಪ್ಪಿರುವ ಘಟನೆ   ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು.

ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿ ಬಳಿಕ  ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ಮಡಿಕೇರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ.ಆದರೆ ಬೆಳಿಗ್ಗೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!