Sunday, April 28, 2024
Homeತಾಜಾ ಸುದ್ದಿಪಾಕ್ ದಾಳಿಗೆ ತಕ್ಕ ಉತ್ತರ ಕೊಟ್ಟ ಭಾರತೀಯ ಸೇನೆ: ಪಾಕಿಸ್ತಾನದ 8 ಯೋಧರು ಸಾವು

ಪಾಕ್ ದಾಳಿಗೆ ತಕ್ಕ ಉತ್ತರ ಕೊಟ್ಟ ಭಾರತೀಯ ಸೇನೆ: ಪಾಕಿಸ್ತಾನದ 8 ಯೋಧರು ಸಾವು

spot_img
- Advertisement -
- Advertisement -

ಜಮ್ಮಕಾಶ್ಮೀರ: ಇಲ್ಲಿನ ಗಡಿಯಲ್ಲಿ ವಾಸ್ತವ ಗಡಿ ರೇಖೆ ಉಲ್ಲಂಘಿಸಿದ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ತಕ್ಕ ಉತ್ತರವನ್ನೇ ನೀಡಿದೆ. ಭಾರತೀಯ ಸೇನೆಯ ಪ್ರತಿ ದಾಳಿಗೆ ಪಾಕ್ ನ 8 ಮಂದಿ ಯೋಧರು ಸಾವನ್ನಪ್ಪಿದ್ದಾರೆ.

ಇನ್ನು ಇದರಲ್ಲಿ ನಾಲ್ವರು ಪಾಕಿಸ್ತಾನ ಸೇನಾ ಯೋಧರು ಮತ್ತು ಮೂವರು ಪಾಕಿಸ್ತಾನ ವಿಶೇಷ ಸೇವಾ ಪಡೆ ಯೋಧರು ಸೇರಿದ್ದಾರೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿವೆ. ಭಾರತೀಯ ಸೇನೆ ನಡೆಸಿರುವ ಪ್ರತಿದಾಳಿಯಲ್ಲಿ ಪಾಕಿಸ್ತಾನದ 10 ರಿಂದ 12 ಮಂದಿ ಯೋಧರು ಗಾಯಗೊಂಡಿದ್ದಾರೆ. ಪಾಕಿಸ್ತಾನ ಸೇನೆಗೆ ಸೇರಿದ ಸೇನಾ ಬಂಕರ್, ಪ್ಯೂಯಿಲ್ ಡಂಪ್ ಮತ್ತು ಲಾಂಚ್ ಪ್ಯಾಡ್ ನಾಶಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಉಗ್ರರ ಹಿಂಬದಿಯಲ್ಲಿ ನಿಂತು ಪಾಕಿಸ್ತಾನ ಸೇನಾ ಯೋಧರು ಭಾರತೀಯ ಯೋಧರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದರು. ವಾಸ್ತವ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿದ್ದಲ್ಲದೇ ಎರಡು ಪ್ರತ್ಯೇಕ ಕಡೆಗಳಲ್ಲಿ ಕದನ ವಿರಾಮ ಉಲ್ಲಂಘಿಸಲಾಗಿದೆ. ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮರಾಗಿದ್ದರು.

- Advertisement -
spot_img

Latest News

error: Content is protected !!