- Advertisement -
- Advertisement -
ಬೆಂಗಳೂರು, ಏ.22- ಲಾಕ್‍ಡೌನ್ ಜಾರಿಯಾದ ನಂತರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 816 ಕೋಟಿ ಲಾಸ್ ಆಗಿದೆ. ಕೊರೊನಾ ಸೋಂಕು ಹರಡದಂತೆ ಎಚ್ಚರ ವಹಿಸುವ ಉದ್ದೇಶದಿಂದ ಸರ್ಕಾರ ಲಾಕ್‍ಡೌನ್ ಜಾರಿಗೆ ತಂದ ನಂತರ ಕೆಎಸ್‍ಆರ್‍ಟಿಸಿ ಬಸ್ ಸಂಚಾರವನ್ನು ರಾಜ್ಯದಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.
ಹೀಗಾಗಿ ಇಲ್ಲಿಯವರೆಗೆ ಸಂಸ್ಥೆಗೆ 816.23 ಕೋಟಿ ನಷ್ಟ ಸಂಭವಿಸಿದೆ ಎಂದು ಕೆಎಸ್‍ಆರ್‍ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 314.89, ವಾಣಿಜ್ಯ ವಿಭಾಗದಲ್ಲಿ 172, ಈಶಾನ್ಯ ವಿಭಾಗದಲ್ಲಿ 180 ಹಾಗೂ ಬಿಎಂಟಿಸಿ ಬಸ್ ಸಂಚಾರ ಸ್ಥಗಿತದಿಂದ 149.34 ಕೋಟಿ ರೂ.ಗಳ ನಷ್ಟ ಸಂಭವಿಸಿದೆ.
- Advertisement -