Friday, May 17, 2024
Homeತಾಜಾ ಸುದ್ದಿಮುಂಬೈ: ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಬಂಧನವಾದವರ ಸಂಖ್ಯೆ ಎಷ್ಟು ಗೊತ್ತೇ?

ಮುಂಬೈ: ಕೊರೋನಾ ಮಾರ್ಗಸೂಚಿ ಉಲ್ಲಂಘಿಸಿ ಬಂಧನವಾದವರ ಸಂಖ್ಯೆ ಎಷ್ಟು ಗೊತ್ತೇ?

spot_img
- Advertisement -
- Advertisement -

ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಆಗಸ್ಟ್‌ 31ರವರೆಗೆ ಲಾಕ್‌ಡೌನ್‌ ಮುಂದುವರೆಸಿತ್ತು.

ರಾಜ್ಯದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸಲು ಸರ್ಕಾರದ ಮಾರ್ಗಸೂಚಿ ಮತ್ತು ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗಿದೆ. ಮಾರ್ಚ್.22ರಿಂದ ಆಗಸ್ಟ್.02ರವರೆಗೂ ಭಾರತೀಯ ದಂಡ ಸಂಹಿತೆ 188 ಅಡಿಯಲ್ಲಿ 2,19,975 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, 883 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 9,601 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 4,31,719ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 322 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 15,316 ಕ್ಕೆ ಏರಿಕೆಯಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಪ್ರಸ್ತುತ 1,49,214 ಸಕ್ರಿಯ ಪ್ರಕರಣಗಳಿದ್ದು, ಪುಣೆಯೊಂದರಲ್ಲೇ 46,345 ಸಕ್ರಿಯ ಪ್ರಕರಣಗಳಿವೆ. ಇನ್ನು ಮಹಾರಾಷ್ಟ್ರದಲ್ಲಿ ಈ ವರೆಗೂ ಗುಣಮುಖರಾದವರ ಸಂಖ್ಯೆ 2,66,883ಕ್ಕೆ ಏರಿಕೆಯಾಗಿದೆ.

- Advertisement -
spot_img

Latest News

error: Content is protected !!