- Advertisement -
- Advertisement -
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿಯ ಶವಪತ್ತೆಯಾಗಿದೆ.
ಸ್ಥಳದಲ್ಲಿ ಘಟನೆ ನಡೆದಾಗಿನಿಂದ ನಿರಂತರವಾಗಿ ಮಳೆಯನ್ನೂ ಲೆಕ್ಕಿಸದೇ ಶೋಧ ಕಾರ್ಯಾಚರಣೆ ನಡೆಯುತ್ತಲೇ ಇದೆ. ಅಲ್ಲದೇ ಈಗಾಗಲೇ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಭೇಟಿ ನೀಡಿದ್ದಾರೆ.
ಇನ್ನು ಇಂದು ಶೋಧ ಕಾರ್ಯಾಚರಣೆ ವೇಳೆ ಘಟನೆಯಲ್ಲಿ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಉಳೊವರೆ ಗ್ರಾಮದ ಸಣ್ಣ ಹನುಮತಗೌಡ (61) ಅವರ ಮೃತದೇಹ ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಪತ್ತೆಯಾಗಿದೆ.ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು ಬಾಕಿ ಉಳಿದ ಮೂವರಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.
- Advertisement -