Thursday, June 4, 2026
Homeತಾಜಾ ಸುದ್ದಿಎಂಟನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

ಎಂಟನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವು

- Advertisement -
- Advertisement -

ಕೇರಳ: ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟ ಘಟನೆ ಕೇರಳದ ಪಾನೂರು ಕಣ್ಣಂಕೋಟ್ ನಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕಣ್ಣೂರು ಬೂದಕಾಡ್ ನಿವಾಸಿ ಅಬ್ದುಲ್ ರಜಾಕ್  ಮತ್ತು ಅಫ್ಸಾ ದಂಪತಿ ಪುತ್ರಿ ಫರ್ಮಿ ಫಾತಿಮಾ ಮೃತಪಟ್ಟ ವಿದ್ಯಾರ್ಥಿನಿ. ಈಕೆ ಮೊಕೇರಿ ರಾಜೀವ್ ಗಾಂಧಿ ಹೈರ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿನಿ.

ನಿನ್ನೆ ಶಾಲೆಯಿಂದ ಮನೆಗೆ ಬಂದ ವಿದ್ಯಾರ್ಥಿನಿ ಕುಸಿದು ಬಿದ್ದಿದ್ದು, ತಕ್ಷಣ ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಬಾಲಕಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

- Advertisement -

Latest News

error: Content is protected !!