- Advertisement -
- Advertisement -
ಕೊಡಗು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ.
ನಿನ್ನೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದರು.
ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಪೊಲೀಸರು 9 ಮಂದಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
- Advertisement -