Saturday, June 6, 2026
Homeತಾಜಾ ಸುದ್ದಿಭರವಸೆ ಈಡೇರಿಸಲು ವಾರ್ಷಿಕ 9000 ಕೋಟಿ ರೂ. ಸಾಲ ಮಾಡಬೇಕಾಗುತ್ತೆ: ಕಾಂಗ್ರೆಸ್‌ನ ಉಚಿತ ವಿದ್ಯುತ್‌ ಘೋಷಣೆಗೆ...

ಭರವಸೆ ಈಡೇರಿಸಲು ವಾರ್ಷಿಕ 9000 ಕೋಟಿ ರೂ. ಸಾಲ ಮಾಡಬೇಕಾಗುತ್ತೆ: ಕಾಂಗ್ರೆಸ್‌ನ ಉಚಿತ ವಿದ್ಯುತ್‌ ಘೋಷಣೆಗೆ ಸುನಿಲ್‌ ಕುಮಾರ್ ಪ್ರತಿಕ್ರಿಯೆ

- Advertisement -
- Advertisement -

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಗ್ರಾಹಕರಿಗೆ ಪ್ರತಿ ತಿಂಗಳು 200 ಯೂನಿಟ್‌ ಉಚಿತ ವಿದ್ಯುತ್‌ ನೀಡುವುದಾಗಿ ಘೊಷೊಸೊದ ಹಿನ್ನೆಲೆಯಲ್ಲಿ ಸಚಿವ ಸುನಿಲ್‌ ಕುಮಾರ್‌ ಪ್ರತಿಕ್ರಿಯಿಸಿ, ಕಾಂಗ್ರೆಸ್‌ ನಾಯಕರು ಘೋಷಿಸಿರುವ ಭರವಸೆ ಈಡೇರಿಸಲು ವಾರ್ಷಿಕ 9000 ಕೋಟಿ ರು. ಸಾಲ ಮಾಡಬೇಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ..

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಸಿದ್ದರಾಮಯ್ಯನವರ ಆಡಳಿತ ಎಂದರೆ ಭರವಸೆ ಉಚಿತ, ಸಾಲ ಖಚಿತ. ಎಲ್ಲ ಆಯಾಮ ಪರಿಶೀಲಿಸಿದಾಗ ನಿಮ್ಮ ಉಚಿತ ವಿದ್ಯುತ್‌ ಭರವಸೆ ಈಡೇರಿಸುವುದಕ್ಕೆ ವಾರ್ಷಿಕ 9000 ಕೋಟಿ ರೂ ಬೇಕಾಗುತ್ತದೆ. ಅಂದರೆ ವಾರ್ಷಿಕವಾಗಿ ಮತ್ತೆ 9000 ಕೋಟಿ ರೂ ಸಾಲದ ಹೂಡಿಕೆ ಮಾಡುವ ಯೋಚನೆ ನಿಮ್ಮದಾಗಿದೆ. ಭರವಸೆ ಉಚಿತ, ಸಾಲ ಖಚಿತ ಎಂಬ ಅರ್ಥನೀತಿಯನ್ನು ಸ್ವಲ್ಪ ಬದಲಾಯಿಸಿಕೊಳ್ಳಿ’ ಎಂದು ಸಲಹೆ ನೀಡಿದ್ದಾರೆ.

- Advertisement -

Latest News

error: Content is protected !!