Sunday, May 19, 2024
Homeಕರಾವಳಿಉಡುಪಿಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಶೇಕಡಾ 99 .9 ರಷ್ಟು ವಿದ್ಯಾರ್ಥಿಗಳು ಪಾಸ್!

ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಶೇಕಡಾ 99 .9 ರಷ್ಟು ವಿದ್ಯಾರ್ಥಿಗಳು ಪಾಸ್!

spot_img
- Advertisement -
- Advertisement -

ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಿದ್ದು,ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದು, ಓರ್ವ ವಿದ್ಯಾರ್ಥಿ ಮಾತ್ರ ತಾನು ಬರೆಯದೇ ಮತ್ತೊಬ್ಬರನ್ನು ಕಳಿಸಿದ್ದರಿಂದಾಗಿ ಶೇ.100ರಷ್ಟು ಫಲಿತಾಂಶ ಪ್ರಕಟಗೊಂಡಿಲ್ಲ ಎಂಬುದಾಗಿ ತಿಳಿಸಿದರು.

ಈ ವರ್ಷ A+ ಗ್ರೇಡ್ ಅನ್ನು 1,28,931 ವಿದ್ಯಾರ್ಥಿಗಳು, ಎ ಗ್ರೇಡ್ ಅನ್ನು 2,50,317 ವಿದ್ಯಾರ್ಥಿಗಳು ಪಡೆದಿದ್ದಾರೆ. ಬಿ ಗ್ರೇಡ್ ಅನ್ನು 2,87,684 ವಿದ್ಯಾರ್ಥಿಗಳು ಪಡೆದಿದ್ದರೆ, ಸಿ ಗ್ರೇಡ್ ಅನ್ನು 1,13,610 ವಿದ್ಯಾರ್ಥಿಗಳು ಆಗಿದ್ದಾರೆ. ಈ ಬಾರಿ 8,76,581 ವಿದ್ಯಾರ್ಥಿಗಳಲ್ಲಿ 4,72,643 ವಿದ್ಯಾರ್ಥಿಗಳು ಹಾಗೂ 4,01,282 ವಿದ್ಯಾರ್ಥಿನಿಯರು ಪಾಸ್ ಆಗಿರೋದಾಗಿ ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆಯನ್ನು ದಾಖಲಿಸೋ ಮೂಲಕ sslc.karnataka.gov.in ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿ ಎಂಬುದಾಗಿ ತಿಳಿಸಿದರು.

- Advertisement -
spot_img

Latest News

error: Content is protected !!