ಚಿಕ್ಕಮಗಳೂರು: ಕೊಪ್ಪ ಮೊರಾರ್ಜಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ. ನಿವೃತ ಜಿಲ್ಲಾ ಮತ್ತು ಸತ್ರ ನ್ಯಾಯಲಯದ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಕರಣದ ತನಿಖೆಗೆ ಜಿಲ್ಲಾ ಸಮನ್ವಯ ಅಧಿಕಾರಿ ಶೈಲಾ ಅವರನ್ನ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಒಂದು ತಿಂಗಳಲ್ಲಿ ವರದಿ ಸಲ್ಲಿಸಲು ಆದೇಶ ನೀಡಲಾಗಿದೆ.

ಕೊಪ್ಪ ಪಟ್ಟಣದ ಮೋರಾರ್ಜಿ ಶಾಲೆಯಲ್ಲಿ ಜೂನ್ 29ರಂದು 9ನೇ ತರಗತಿ ವಿದ್ಯಾರ್ಥಿನಿ ಶಮಿತಾ ಆತ್ಮಹತ್ಯೆಗೆ ಶರಣಾಗಿದ್ದಳು. ಇನ್ನು ಎರಡು ವರ್ಷದ ಹಿಂದೆ ಅಂದ್ರೆ 2023 ಜುಲೈ 27ರಂದು ಅಮೂಲ್ಯ ಇದೇ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಅದೇ ಶಾಲೆಯಲ್ಲಿ ಅದೇ ಜಾಗದಲ್ಲಿ 2025 ಜೂನ್ 29ರಂದು ಶಮಿತಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇಬ್ಬರು ವಿದ್ಯಾರ್ಥಿನಿಯರು ಒಂದೇ ರೂಂನ ಒಂದೇ ಕಬ್ಬಿಣಕ್ಕೆ ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು. ಹಾಗಾಗಿ ಉನ್ನತ ತನಿಖೆ ನಡೆಸುವಂತೆ ಸ್ಥಳಿಯರು, ಸಾರ್ವಜನಿಕರು ಆಗ್ರಹಿಸಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ನಡೆಸಿ ಸೂಕ್ತ ತನಿಖೆಗೆ ಆದೇಶಿಸಿದ್ರು.