Wednesday, July 15, 2026
Homeಕರಾವಳಿಮಂಗಳೂರುಮೂಡಬಿದಿರೆ: ಎಕ್ಸಾಂ ಬರೆದು ಮನೆಗೆ ವಾಪಾಸ್ಸಾಗುತ್ತಿದ್ದಾಗ ಕಾರು ಢಿಕ್ಕಿ, ಬಾಲಕ ಸಾವು

ಮೂಡಬಿದಿರೆ: ಎಕ್ಸಾಂ ಬರೆದು ಮನೆಗೆ ವಾಪಾಸ್ಸಾಗುತ್ತಿದ್ದಾಗ ಕಾರು ಢಿಕ್ಕಿ, ಬಾಲಕ ಸಾವು

- Advertisement -
- Advertisement -

ಮೂಡಬಿದಿರೆ: ಎಕ್ಸಾಂ ಬರೆದು ಮನೆಗೆ ವಾಪಾಸ್ಸಾಗುತ್ತಿದ್ದಾಗ ಕಾರು ಢಿಕ್ಕಿಯಾಗಿ ಬಾಲಕ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಮೂಡುಬಿದಿರೆ ಹೊರವಲಯದಲ್ಲಿರುವ ಬನ್ನಡ್ಕದಲ್ಲಿ ನಡೆದಿದೆ.

ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಆದಿತ್ಯ (14) ಮೃತ ದುರ್ದೈವಿ.

ಆದಿತ್ಯ ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭ ಕಾರ್ಕಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಯೋರ್ವ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದರಾದರೂ, ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!