Thursday, June 4, 2026
Homeಕರಾವಳಿಮಂಗಳೂರಿನ ಕಾಪಿಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿ ನಾಪತ್ತೆ

ಮಂಗಳೂರಿನ ಕಾಪಿಕಾಡಿನಲ್ಲಿ 9ನೇ ತರಗತಿ ವಿದ್ಯಾರ್ಥಿ ನಾಪತ್ತೆ

- Advertisement -
- Advertisement -

ಮಂಗಳೂರು ಒಂಭತ್ತನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಬೋಳಿಯಾರ್ ಗ್ರಾಮ ವ್ಯಾಪ್ತಿಯ ಕಾಪಿಕಾಡು ಎಂಬಲ್ಲಿ ನಡೆದಿದೆ. ಹೈದರ್ ಎಂಬವರ ಪುತ್ರ ಅಬ್ದುಲ್ ರಹಿಮಾನ್(16) ಮಾ.16ರಿಂದ ನಾಪತ್ತೆಯಾಗಿರುವುದಾಗಿ ಕೊಣಾಜೆ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಡಿಪು ಸರಕಾರಿ ಪ್ರೌಢ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಅಬ್ದುಲ್ ರಹಿಮಾನ್ ಬುಧವಾರ ಸಂಜೆ 5:30ರ ಬಳಿಕ ಕಾಣೆಯಾಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!