Wednesday, June 3, 2026
Homeಕರಾವಳಿಉಡುಪಿವಿಶ್ವ ಹೃದಯ ದಿನದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ

ವಿಶ್ವ ಹೃದಯ ದಿನದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ

- Advertisement -
- Advertisement -

ಉಡುಪಿ: ವಿಶ್ವ ಹೃದಯ ದಿನದ ಹಿನ್ನಲೆ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ ನಡೆಯಿತು.

ನರ್ಸಿಂಗ್ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಜಾಥಾದಲ್ಲಿ ಭಾಗವಹಿಸಿದ್ದರು.

ಜಾಥಾದಲ್ಲಿ ಏಕಕಾಲದಲ್ಲಿ ಸಾಮೂಹಿಕ ನೃತ್ಯ ಮಾಡಿ ವಿದ್ಯಾರ್ಥಿನಿಯರು ಗಮನ ಸೆಳೆದರು

ಆದರ್ಶ ಆಸ್ಪತ್ರೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದ ಆಶ್ರಯದಲ್ಲಿ ಜಾಥಾ ನಡೆಯಿತು.

ಜಾಥಾಕ್ಕೆ ಉಡುಪಿ ಶಾಸಕ ಕೆ.‌ ರಘುಪತಿ ಭಟ್ ಚಾಲನೆ ನೀಡಿದ್ದು, ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಾಥಾದಲ್ಲಿ ಹೃದ್ರೋಗದ ಬಗ್ಗೆ ಮಾಹಿತಿ ನೀಡುವ ಹಾಗೂ ಜಾಗೃತಿ ಮೂಡಿಸುವ ವಿವಿಧ ಫಲಕಗಳ ಪ್ರದರ್ಶನ ಕೂಡಾ ನಡೆಯಿತು.

- Advertisement -

Latest News

error: Content is protected !!