Tuesday, April 30, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4, ಉಡುಪಿ ಜಿಲ್ಲೆಯಲ್ಲಿ 4 ಗ್ರಾಮ ಪಂಚಾಯತ್ ಗಳಿಗೆ ಉಪಚುನಾವಣೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4, ಉಡುಪಿ ಜಿಲ್ಲೆಯಲ್ಲಿ 4 ಗ್ರಾಮ ಪಂಚಾಯತ್ ಗಳಿಗೆ ಉಪಚುನಾವಣೆ ಘೋಷಣೆ

spot_img
- Advertisement -
- Advertisement -

ಮಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯದ 151 ಗ್ರಾಮ ಪಂಚಾಯತ್ ಗಳ 187 ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಗ್ರಾಮ ಪಂಚಾಯತ್ ಗಳು, ಉಡುಪಿ ಜಿಲ್ಲೆಯಲ್ಲಿ ನಾಲ್ಕು ಗ್ರಾಮ ಪಂಚಾಯತ್ ಗಳಲ್ಲಿ ಉಪ ಚುನಾವಣೆ ನಡೆಯಲಿದೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮ ಪಂಚಾಯತ್ ನ ದೇವಶ್ಯ ಪಡೂರು ಕ್ಷೇತ್ರ, ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ ಪಂಚಾಯತ್ ನ ಬಡಗುಳಿವಾಡಿ ಕ್ಷೇತ್ರ ಎಕ್ಕಾರು ಗ್ರಾಮ ಪಂಚಾಯತ್ ನ ತೆಂಕ ಎಕ್ಕಾರು ಕ್ಷೇತ್ರ ಮತ್ತು ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಬೈಂದೂರು ತಾಲೂಕಿನ ಕಾಲ್ತೊಡು ಗ್ರಾಮ ಪಂಚಾಯತ್ ನ ಕಾಲ್ತೋಡು ಕ್ಷೇತ್ರ, ಬ್ರಹ್ಮಾವರ ತಾಲೂಕಿನ ಯಡ್ತಾಡಿ ಗ್ರಾಮ ಪಂಚಾಯತ್ ನ ಯಡ್ತಾಡಿ ಕ್ಷೇತ್ರ, ಉಪ್ಪೂರು ಗ್ರಾಮ ಪಂಚಾಯತ್ ನ ಉಪ್ಪೂರು ಕ್ಷೇತ್ರ ಮತ್ತು ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್ ನ ಪಿಲಾರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಇನ್ನು ಮಡಿಕೇರಿ ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ನ ಪೆರಾಜೆ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾಗಿದೆ. ಅಕ್ಟೋಬರ್ 10ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅಕ್ಟೋಬರ್ 28 ರಂದು ಮತದಾನ ನಡೆಯಲಿದೆ.
ಅಕ್ಟೋಬರ್ 31ರಂದು ಮತ ಎಣಿಕೆ ನಡೆಯಲಿದೆ.

- Advertisement -
spot_img

Latest News

error: Content is protected !!