Friday, June 5, 2026
Homeಕರಾವಳಿಉಡುಪಿಉಡುಪಿ: ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಉಡುಪಿ: ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

- Advertisement -
- Advertisement -

ಉಡುಪಿ: ರಿಕ್ಷಾವೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬಂಟಕಲ್ಲು ಪೇಟೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಪಡುಬೆಳ್ಳೆ ಪಾಂಬೂರು ನಿವಾಸಿ ಶಂಕರ ಕೋಟ್ಯಾನ್(61) ಮೃತ ದುರ್ದೈವಿ.

ಬಂಟಕಲ್ಲಿನಲ್ಲಿ ಬೈದಶ್ರೀ ಎಂಬ ಫ್ಯಾನ್ಸಿ ಸ್ಟೋರ್ ಹೊಂದಿರುವ ಅವರು  ಪೆಟ್ರೋಲ್ ಹಾಕಲು ಪೆಟ್ರೋಲ್ ಪಂಪ್‌ಗೆ ಬೈಕಿನಲ್ಲಿ ಹೋಗುತ್ತಿದ್ದಾಗ ಶಂಕರಪುರ ಕಡೆಯಿಂದ ಬಂಟಕಲ್ಲು ಕಡೆ ಬರುತ್ತಿದ್ದ ರಿಕ್ಷಾ ರಸ್ತೆಗೆ ಅಳವಡಿಸಿದ್ದ ಬ್ಯಾರಿಕೇಡ್‌ಗೆ ಡಿಕ್ಕಿಯಾಗಿ ಬಳಿಕ ಬೈಕಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಕೋಟ್ಯಾನ್ ಅವರನ್ನು ಮಣಿಪಾಲದ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಸಹೋದರ ಸಹೋದರಿಯರನ್ನು ಅಗಲಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!