Monday, June 8, 2026
Homeತಾಜಾ ಸುದ್ದಿಸಿಎಂ ಭೇಟಿ ಮಾಡಿ ಧನ್ಯವಾದ ಹೇಳಿದ ದಿ. ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ

ಸಿಎಂ ಭೇಟಿ ಮಾಡಿ ಧನ್ಯವಾದ ಹೇಳಿದ ದಿ. ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ

- Advertisement -
- Advertisement -

ಬೆಂಗಳೂರು: ಬಿಜೆಪಿ ಕಾರ್ಯಕರ್ತನಾಗಿದ್ದ ದಿ. ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ಬೆಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಸಂದರ್ಭದಲ್ಲಿ ನೂತನ ಕುಮಾರಿ ಸಿಎಂ ಅವರನ್ನು ಭೇಟಿ ಮಾಡಿದರು.

ಗ್ರೂಪ್ ಸಿ ಹುದ್ದೆಗೆ ತಮ್ಮನ್ನು ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಸಿಎಂಗೆ ನೂತನ ಕುಮಾರಿ ಧನ್ಯವಾದ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚೆಗೆಷ್ಟೇ ನೂತನ ಕುಮಾರಿ ಅವರನ್ನು ಸಿಎಂ ಸಚಿವಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಸಿ ಗ್ರೂಪ್ ಹುದ್ದೆಗೆ ನೇಮಕಾತಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

- Advertisement -

Latest News

error: Content is protected !!