Thursday, June 4, 2026
Homeಕರಾವಳಿಉಡುಪಿಕೋಟ: ಅಪ್ರಾಪ್ತ ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ

ಕೋಟ: ಅಪ್ರಾಪ್ತ ಸಹೋದರಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ ಜೈಲುಶಿಕ್ಷೆ

- Advertisement -
- Advertisement -

ಕೋಟ: ಅಪ್ರಾಪ್ತ ವಯಸ್ಸಿನ ಬಾಲಕಿ ಹಾಗೂ ಆಕೆ ಸಹೋದರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೊಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಕೋಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2015ರಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ವಯಸ್ಸಿನ ಬಾಲಕಿ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ ಆರೋಪಿ ಕಿಶನ್ ಲೈಂಗಿಕ ಕಿರುಕುಳ ನೀಡಿದ್ದನೆನ್ನಲಾಗಿತ್ತು. ಬಳಿಕ ಆಕೆ ಸೋದರಿಯನ್ನು ಕೂಡ ಅಡ್ಡಗಟ್ಟಿದ್ದು ಆಕೆ ಆತನಿಂದ ತಪ್ಪಿಸಿ ಕೊಂಡಿದ್ದಳು ಎಂದು ಕೋಟ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!