Saturday, June 6, 2026
Homeಕರಾವಳಿಉಡುಪಿಉಡುಪಿ; ಬಸ್ಸಿನಿಂದ ಬಿದ್ದು ಯುವಕ‌‌ ಸಾವು

ಉಡುಪಿ; ಬಸ್ಸಿನಿಂದ ಬಿದ್ದು ಯುವಕ‌‌ ಸಾವು

- Advertisement -
- Advertisement -

ಉಡುಪಿ: ಬಸ್ಸನ್ನು ಒಮ್ಮೇಲೆ ಚಲಾಯಿಸಿದ ಪರಿಣಾಮ ಬಸ್ಸಿನಿಂದ ಇಳಿಯುತ್ತಿದ್ದ ಯುವಕನೊಬ್ಬ   ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಅಲೆವೂರು ರಾಂಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಗೋಪುರದ ಬಳಿ ನಡೆದಿದೆ.ಮೃತರನ್ನು ಜಾರ್ಖಂಡ್ ರಾಜ್ಯದ ಮಂಜಯ್ ಕುಮಾರ್ (19) ಮೃತ ಯುವಕ.

ನಿಲ್ದಾಣದಲ್ಲಿ ನಿಂತಿದ್ದ ಬಸ್ಸನ್ನು ಚಾಲಕನು ಒಮ್ಮೆಲೆ ನಿರ್ಲಕ್ಷ್ಯತನದಿಂದ ಮುಂದಕ್ಕೆ ಚಲಾಯಿಸಿದ ಪರಿಣಾಮ ಬಸ್ಸಿನಿಂದ ಇಳಿಯುತ್ತಿದ್ದ ಮಂಜಯ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಅಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!