Tuesday, June 9, 2026
Homeತಾಜಾ ಸುದ್ದಿಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

- Advertisement -
- Advertisement -

ಬೆಂಗಳೂರು: ಜನವರಿ 6, 7 ಮತ್ತು 8 ರಂದು ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಜೊತೆ ಚರ್ಚೆ ನಡೆಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಸಮ್ಮೇಳನದ ದಿನಾಂಕ ಅಂತಿಮಗೊಳಿಸಿದ್ದಾರೆ.

ಸಮ್ಮೇಳನಕ್ಕೆ ಎಂಟರಿಂದ ಹತ್ತು ಲಕ್ಷ ಜನರ ನಿರೀಕ್ಷೆಯಿದ್ದು, 30 ಸಾವಿರ ವಸತಿ ವ್ಯವಸ್ಥೆ, ಪ್ರತಿ ದಿ‌ನ 2.50 ಲಕ್ಷ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಅಕ್ಟೋಬರ್ 20ರಂದು ಹಾವೇರಿಯಲ್ಲಿ ಸಿದ್ಧತಾ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದ್ದು, ವಿಧಾನಸೌಧದಲ್ಲಿ ಇಂದು ಸಚಿವ ಸುನೀಲ್ ಕುಮಾರ್ ಪೂರ್ವಭಾವಿ ಸಭೆ ನಡೆಸಿದರು.

ಸಭೆಯಲ್ಲಿ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್, ಕಸಾಪ ಅಧ್ಯಕ್ಷ ಮಹೇಶ್ ಜೋಷಿ, ಶಾಸಕರಾದ ನೆಹರು ಓಲೇಕಾರ್, ಅರುಣ್ ಕುಮಾರ್, ವಿರೂಪಾಕ್ಷಪ್ಪ ಬಳ್ಳಾರಿ ಮತ್ತು ಹಾವೇರಿ ಡಿಸಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!