Thursday, June 4, 2026
Homeತಾಜಾ ಸುದ್ದಿಸಿಜೆಐ ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ ಹಿನ್ನೆಲೆ: ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್:ಗೃಹ ಸಚಿವ ಆರಗ ಜ್ಞಾನೇಂದ್ರ...

ಸಿಜೆಐ ಪೀಠಕ್ಕೆ ಹಿಜಾಬ್ ಪ್ರಕರಣ ವರ್ಗಾವಣೆ ಹಿನ್ನೆಲೆ: ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್:ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

- Advertisement -
- Advertisement -

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಹಿಜಾಬ್ ತೀರ್ಪು ಹೊರ ಬಿದ್ದ ಹಿನ್ನೆಲೆ ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಭದ್ರತೆ ಕೂಡಾ ಎಲ್ಲಾ ರೀತಿಯಲ್ಲಿ ಮಾಡಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಮಾಡಲಾಗಿದೆ ಎಂದು ಹೇಳಿದ್ದಾರೆ.

ಎಲ್ಲಾ ರೀತಿಯಲ್ಲಿ ಪೊಲೀಸರು ಭದ್ರತೆ ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲಸ ಆಗುತ್ತಿದೆ, ವಿಭಿನ್ನ ತೀರ್ಪು ಪ್ರಕಟ ಆಗಿರುವ ಕಾರಣ ಸಿಜೆಐ ಅವರು ಏನು ಆದೇಶ ಕೊಡುತ್ತಾರೆ ಅಂತ ಎದುರು ನೋಡುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ.

- Advertisement -

Latest News

error: Content is protected !!