Thursday, June 4, 2026
Homeಕರಾವಳಿಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಬಂಧನ

ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಮಹಿಳೆಯರ ಬಂಧನ

- Advertisement -
- Advertisement -

ಕಾರ್ಕಳ;  ಸರಕಾರಿ ಆಸ್ಪತ್ರೆಯಲ್ಲಿ ಸರಕಳ್ಳತನಕ್ಕೆ ಯತ್ನಿಸಿದ ಮಹಿಳೆಯರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಸರಕಾರಿಆಸ್ಪತ್ರೆಯಲ್ಲಿ ಕಳ್ಳತನ ಯತ್ನಿಸುತ್ತಿದ್ದ ವೇಳೆ ಸಾರ್ವಜನಿಕರ ಸಹಾಯದಿಂದ ಕಳ್ಳಿಯರ ತಂಡವನ್ನು ರೆಡ್ ಹ್ಯಾಂಡಾಗಿ ಸೆರೆ ಹಿಡಿಯಲಾಗಿದೆ. ಇವರು ಮೂಲತಃ ತಮಿಳುನಾಡಿನವರು ಎಂದು ತಿಳಿದು ಬಂದಿದೆ. ಇನ್ನು ಬಂಟ್ವಾಳದಿಂದ ಆಟೋದಲ್ಲಿ ತೆರಳುತ್ತಿದ್ದ ವೃದ್ಧೆಯೊಬ್ಬರ ಚಿನ್ನದ ಸರವನ್ನು ಇದೇ ತಂಡ ಕಳ್ಳತನ ಮಾಡಿರಬೇಕು ಎಂದು ಅಂದಾಜಿಸಲಾಗಿದೆ.

ಕಳೆದ ಒಂದು ವಾರದಿಂದ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಕಳ್ಳತನದಂತ ಪ್ರಕರಣಗಳು ವರದಿಯಾಗುತ್ತಿದೆ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

- Advertisement -

Latest News

error: Content is protected !!