Friday, June 5, 2026
Homeತಾಜಾ ಸುದ್ದಿಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

- Advertisement -
- Advertisement -

ಶಿವಮೊಗ್ಗ; ಭಜರಂಗದಳದ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗೆ ಎನ್ ಐಎ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಜಾಫರ್ ಸಾದಿಕ್ (52) ಎಂಬವರಿಗೆ ಎನ್ ಐಎ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ.

ಹರ್ಷ ಕೊಲೆ ಪ್ರಕರಣ ಸಂಬಂಧ ಫೆಬ್ರವರಿ 24 ರಂದು ಬಂಧಿಸಿದ್ದ ಪೊಲೀಸರು, ಹರ್ಷ ಕೊಲೆ ಪ್ರಕರಣದಲ್ಲಿ 10ನೇ ಆರೋಪಿಯಾಗಿ ಮಾಡಿದ್ದರು. ಪ್ರಕರಣದ 6 ನೇ ಆರೋಪಿ ಜಿಲಾನ್ ತಂದೆಯಾದ ಸಾದಿಕ್. ಜಾಮೀನು ಕೋರಿ ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಎನ್ ಐಎ ವಿಶೇಷ ನ್ಯಾಯಾಲಯ ಆರೋಪಿಗೆ 50 ಸಾವಿರ ರೂ. ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ನೀಡಬೇಕು. ನ್ಯಾಯಾಲಯ ವಿನಾಯಿತಿ ನೀಡದ ಹೊರತು ಪ್ರತಿಬಾರಿ ಪ್ರಕರಣದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ನಾಶ ಮಾಡಬಾರದು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು ಎಂದು ಷರತ್ತು ವಿಧಿಸಿ ಷರತ್ತುಬದ್ಧ ಜಾಮೀನು‌‌ ನೀಡಿದೆ.

- Advertisement -

Latest News

error: Content is protected !!