Friday, June 5, 2026
Homeಕರಾವಳಿಬೆಳ್ತಂಗಡಿ; ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದಾಳಿಗೆ ಯತ್ನ:ಶಾಸಕರು ಅಪಾಯದಿಂದ ಜಸ್ಟ್ ಮಿಸ್ ಆಗಿದ್ದು...

ಬೆಳ್ತಂಗಡಿ; ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದಾಳಿಗೆ ಯತ್ನ:ಶಾಸಕರು ಅಪಾಯದಿಂದ ಜಸ್ಟ್ ಮಿಸ್ ಆಗಿದ್ದು ಹೇಗೆ?

- Advertisement -
- Advertisement -

ಬಂಟ್ವಾಳ:  ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ದಾಳಿಗೆ ಯತ್ನಿಸಿದ ಘಟನೆ ಅ. 13ರ (ನಿನ್ನೆ) ರಾತ್ರಿ ಸುಮಾರು 11-15 ರ ವೇಳೆಗೆ ನಡೆದಿದೆ.

ಹರೀಶ್ ಪೂಂಜಾ ಅವರು ಮಂಗಳೂರು ವಿಮಾನ ನಿಲ್ದಾಣದಿಂದ ಬೆಳ್ತಂಗಡಿಗೆ ಪ್ರಯಾಣಿಸುತ್ತಿದ್ದ ವೇಳೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಶಾಸಕರ ಕಾರನ್ನು ಅಡ್ಡಗಟ್ಟಿ ದಾಳಿಗೆ ಯತ್ನಿಸಿದೆ ಎನ್ನಲಾಗಿದೆ.

ಶಾಸಕರು ತಮ್ಮ ಕಾರನ್ನು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ತೆರಳುತ್ತಿದ್ದರು. ಹರೀಶ್ ಪೂಂಜಾ ತಮ್ಮ ಗೆಳೆಯರ ಕಾರಿನಲ್ಲಿ ಮುಂದೆ ಹೋಗುತ್ತಿದ್ದರೆ, ಶಾಸಕರ ಅಧಿಕೃತ ಕಾರು ಆ ಕಾರನ್ನು ಹಿಂಬಾಲಿಸುತ್ತಿತ್ತು. ಹರೀಶ್ ಪೂಂಜಾ ಅವರ ಅಧಿಕೃತ ವಾಹನ ಚಾಲಕ ಶಾಸಕರ ಕಾರನ್ನು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ಕಾರನ್ನು ತಡೆಗಟ್ಟಿದ ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ಬೈದು, ತಲವಾರು ಝಳಪಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಶಾಸಕರು ತಮ್ಮ ಕಾರಿನಲ್ಲಿ ಇರದೇ ಇದ್ದುದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!