Monday, August 31, 2026
Homeಕರಾವಳಿಉಡುಪಿಹಿಜಾಬ್ ತೀರ್ಪು ಸಂತ್ರಸ್ಥ ಹೆಣ್ಣುಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಉಡುಪಿಯ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ...

ಹಿಜಾಬ್ ತೀರ್ಪು ಸಂತ್ರಸ್ಥ ಹೆಣ್ಣುಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ: ಉಡುಪಿಯ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಟ್ವೀಟ್

- Advertisement -
- Advertisement -

ಉಡುಪಿ: ಹಿಜಾಬ್ ವಿಚಾರ ಸುಪ್ರೀಂ ಕೋರ್ಟ್ ಸಿಜೆಐ ಪೀಠಕ್ಕೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಈ ತೀರ್ಪು ಸಂತ್ರಸ್ಥ ಹೆಣ್ಣು ಮಕ್ಕಳ ಹಕ್ಕುಗಳನ್ನು ಎತ್ತಿ ಹಿಡಿದಿದೆ ಎಂದು ಉಡುಪಿಯ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿ ಆಲಿಯಾ ಅಸಾದಿ ಟ್ವೀಟ್ ಮಾಡಿದ್ದಾರೆ.

ನ್ಯಾಯಮೂರ್ತಿ ಧುಲಿಯಾ ಹೇಳಿಕೆ ನ್ಯಾಯಯುತ ತೀರ್ಪಿನ ಭರವಸೆಯನ್ನು ಮತ್ತಷ್ಟು ಬಲಪಡಿಸಿದೆ ಎಂದು ಟ್ವೀಟ್ ನಲ್ಲಿ ಹೇಳಿರುವ ಆಲಿಯಾ, ಕನಿಷ್ಠ ಪಕ್ಷದಲ್ಲಿ ಸಾಂವಿಧಾನಿಕ ಮೌಲ್ಯವನ್ನು ಮುಂದುವರೆಸಿದೆ ಎಂದಿದ್ದಾರೆ.

ಅಲ್ಲದೇ, ಸಾವಿರಾರು ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನು ಮತ್ತೆ ಆರಂಭಿಸಲು ಕಾಯುತ್ತಿದ್ದಾರೆ ಎಂದು ಉಡುಪಿಯ ವಿದ್ಯಾರ್ಥಿನಿ ಆಲಿಯಾ ಅಸಾದಿ ಟ್ವೀಟ್ ನಲ್ಲಿ ಹೇಳಿದ್ದಾರೆ.

ವಿದ್ಯಾರ್ಥಿನಿ ಆಲಿಯಾ ಅಸಾದಿ ಉಡುಪಿಯಲ್ಲಿ ನಡೆದಿದ್ದ ಹಿಜಾಬ್ ಕುರಿತ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದರು.

- Advertisement -

Latest News

error: Content is protected !!