Saturday, June 13, 2026
Homeತಾಜಾ ಸುದ್ದಿಮಂಗಳೂರು: ಸುರತ್ಕಲ್‌ ಟೋಲ್‌ ತೆರವುಗೊಳಿಸುವ ವಿಚಾರ: ಹೋರಾಟಗಾರರು ಕಾನೂನು ಕೈಗೆತ್ತಿಕೊಂಡ್ರೆ ಕ್ರಮ ಖಂಡಿತ: ನಳಿನ್

ಮಂಗಳೂರು: ಸುರತ್ಕಲ್‌ ಟೋಲ್‌ ತೆರವುಗೊಳಿಸುವ ವಿಚಾರ: ಹೋರಾಟಗಾರರು ಕಾನೂನು ಕೈಗೆತ್ತಿಕೊಂಡ್ರೆ ಕ್ರಮ ಖಂಡಿತ: ನಳಿನ್

- Advertisement -
- Advertisement -

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ನಾಳೆ ‘ನೇರ ಕಾರ್ಯಾಚರಣೆ’ಗೆ ಕರೆ ನೀಡಲಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ತನ್ನದೇ ಆದ ನಿಯಮದಡಿ‌ ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಹೋರಾಟ ಕೈ ಬಿಡುವಂತೆ ಈಗಾಗಲೇ ವಿನಂತಿ ಮಾಡಿಕೊಂಡಿದ್ದೇನೆ. ಶಾಂತಿಯುತವಾಗಿ ಹೋರಾಟ ಮಾಡಿದ್ರೆ ನಮ್ಮದೇನು ಅಭ್ಯಂತರವಿಲ್ಲ. ಕಾನೂನು ಉಲ್ಲಂಘಿಸಿದ್ರೆ ಮುಂದೆ ಆಗುವ ಅನಾಹುತಕ್ಕೆ ಅವರೇ ಹೊಣೆಯಾಗುತ್ತಾರೆ ಎಂದರು. ಕಾನೂನು ಸಮಸ್ಯೆ ಕಾರಣ ಟೋಲ್ ಗೇಟ್ ತೆರವು ಕಷ್ಟವಾಗಿದೆ. ಹೀಗಾಗಿ 20 ದಿನಗಳ ಕಾಲ ಹೋರಾಟ ಮುಂದೂಡಿ ಅಂತ ವಿನಂತಿ ಮಾಡ್ತೇನೆ ಎಂದು ಹೋರಾಟಗಾರರಲ್ಲಿ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!