Thursday, June 4, 2026
Homeಕರಾವಳಿಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಸಹೋದರರ ಬಂಧನ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಸಹೋದರರ ಬಂಧನ

- Advertisement -
- Advertisement -

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಸಹೋದರರಿಬ್ಬರನ್ನು ಬಂಧಿಸಿರುವ ಘಟನೆ ಪರ್ಲಿಯಾ ಎಂಬಲ್ಲಿ ನಡೆದಿದೆ.

ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ನೇತೃತ್ವದ ತಂಡ ದಾಳಿ ನಡೆಸಿ ಪರ್ಲಿಯಾ ನಿವಾಸಿಗಳಾದ ಉಮ್ಮರ್ ಸಿಯಾಫ್, ಹಾಗೂ ಅಹಮ್ಮದ್ ಸೈಫ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಪರ್ಲಿಯಾ ಮದ್ದ ಎಂಬಲ್ಲಿ ರಸ್ತೆ ಬದಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಿಂತುಕೊಂಡು ಗಾಂಜಾ ಸೇವನೆ ಮಾಡುವುದು ಅಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿ ವರ್ತಿಸಿದ್ದರು ಎಂದು ಸ್ಥಳೀಯರು ಪೋಲೀಸರಿಗೆ ದೂರು ನೀಡಿದ್ದರು.


ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೋಲೀಸರು ಆರೋಪಿಗಳಿಬ್ಬರನ್ನು ಸ್ಥಳದಲ್ಲಿ ಬಂಧಿಸಿ ವಿಚಾರಣೆ ನಡೆಸಿದಾಗ ಗಾಂಜಾ ಸೇವೆನೆ ಮಾಡಿದ ಬಗ್ಗೆ ತಪ್ಪು ಒಪ್ಪಿಕೊಂಡಿದ್ದಾರೆ‌. ಆ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಇವರು ಗಾಂಜಾ ಸೇವಿಸಿದ್ದು ಖಾತ್ರಿಯಾಗಿ ಅವರ ಮೇಲೆ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ‌‌ ವಿಧಿಸಿದೆ.

- Advertisement -

Latest News

error: Content is protected !!