Saturday, June 6, 2026
Homeತಾಜಾ ಸುದ್ದಿಇಂದಿನಿಂದ ಮೈಸೂರಿನಲ್ಲಿ 2 ದಿನ ಜೆಡಿಎಸ್ ಸಮಾಲೋಚನಾ ಸಭೆ: ಹೆಚ್.ಡಿ.‌ ದೇವೇಗೌಡ ಉಪಸ್ಥಿತಿ, ಹೆಚ್.ಡಿ. ಕುಮಾರಸ್ವಾಮಿ...

ಇಂದಿನಿಂದ ಮೈಸೂರಿನಲ್ಲಿ 2 ದಿನ ಜೆಡಿಎಸ್ ಸಮಾಲೋಚನಾ ಸಭೆ: ಹೆಚ್.ಡಿ.‌ ದೇವೇಗೌಡ ಉಪಸ್ಥಿತಿ, ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ

- Advertisement -
- Advertisement -

ಮೈಸೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ನವೆಂಬರ್ 1ರಿಂದ ಆರಂಭವಾಗಲಿರುವ ಪಂಚರತ್ನ ರಥಯಾತ್ರೆ, ಪಕ್ಷ ಸಂಘಟನೆ ಸೇರಿದಂತೆ ಇತ್ಯಾದಿ ಪ್ರಮುಖ ಅಂಶಗಳ ಅಜೆಂಡಾ ಇಟ್ಟುಕೊಂಡ ಮೈಸೂರಿನಲ್ಲಿ ಇಂದಿನಿಂದ ಎರಡು ದಿನಗಳ ಸಮಾಲೋಚನಾ ಸಭೆಯನ್ನು ಜೆಡಿಎಸ್ ಹಮ್ಮಿಕೊಂಡಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಈ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಅಲ್ಲದೇ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಷೆಂಪೂರ್, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಂಬರುವ ವಿಧಾನಸಭೆ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಪಕ್ಷದ ಜಿಲ್ಲಾ ಘಟಕಗಳ ಅಧ್ಯಕ್ಷರು ಸೇರಿದಂತೆ ಆಯ್ದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ನವೆಂಬರ್ 1ರಿಂದ ಪಂಚರತ್ನ ರಥಯಾತ್ರೆ ಅರಂಭವಾಗುತ್ತಿದ್ದು, ಯಾತ್ರೆಯ ಅಂತಿಮ ಹಂತದ ಸಿದ್ಧತೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಅಲ್ಲದೇ ರಥಯಾತ್ರೆ ಹೇಗಿರುತ್ತದೆ? ಅದರ ಸ್ವರೂಪವೇನು? ಯಾವ ಮಾರ್ಗದಲ್ಲಿ ಸಾಗುತ್ತದೆ? ಗ್ರಾಮ ವಾಸ್ತವ್ಯ, ಜನ ಸಂಪರ್ಕ ಸಭೆ, ಸಮಾವೇಶ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಅನುಸರಿಸಬಹುದಾದ ಕಾರ್ಯತಂತ್ರದ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಲಿದೆ.

- Advertisement -

Latest News

error: Content is protected !!