Saturday, June 13, 2026
Homeತಾಜಾ ಸುದ್ದಿನವೆಂಬರ್ 11 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

ನವೆಂಬರ್ 11 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ

- Advertisement -
- Advertisement -

ಬೆಂಗಳೂರು: ನವೆಂಬರ್ 11 ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ‌ನರೇಂದ್ರ ಮೋದಿ ಆಗಮಿಸಲಿದ್ದಾರೆ.‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ‌‌‌‌ ನಿಲ್ದಾಣದ ಮುಂಭಾಗದಲ್ಲಿ 108 ಅಡಿ ಎತ್ತರದ ಕಂಚಿನ‌ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.

ಇದೇ ವೇಳೆ‌ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ‌ಎರಡನ್ನು ಕೂಡಾ ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.

ನವೆಂಬರ್ 10 ರಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿರುವ ಮೋದಿ 11 ರಂದು ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೆಹಲಿಗೆ ವಾಪಸಾಗಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿದೆ.

- Advertisement -

Latest News

error: Content is protected !!