Saturday, June 13, 2026
Homeಕರಾವಳಿಉಡುಪಿಈ ವರ್ಷದಿಂದ ಪಡಿತರ ಮೂಲಕ ಕುಚ್ಚಲಕ್ಕಿ ವಿತರಣೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಈ ವರ್ಷದಿಂದ ಪಡಿತರ ಮೂಲಕ ಕುಚ್ಚಲಕ್ಕಿ ವಿತರಣೆ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

- Advertisement -
- Advertisement -

ಬೆಂಗಳೂರು: ಕರಾವಳಿ ಭಾಗದಲ್ಲಿ ಈ ವರ್ಷ ಪಡಿತರ ಕಾರ್ಡ್ ಗೆ ಕುಚ್ಚಲಕ್ಕಿ ಕೊಡುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಇಂದು ಮಾತನಾಡಿದ ಸಚಿವರು, ಕೇಂದ್ರ ಸರ್ಕಾರದಿಂದ ನಮಗೆ ಅನುಮೋದನೆ ಸಿಕ್ಕಿದೆ,
ಕೇರಳ ಮಾದರಿಯಲ್ಲಿ ಹೆಚ್ಚುವರಿ ಅನುದಾನ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಈಗ ಕುಚ್ಚಲಕ್ಕಿ ಕಟಾವು ಆರಂಭವಾಗಿದ್ದು, ಬೇರೆ ಕಡೆ ಖರೀದಿಸಿ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅಕ್ಕಿ ಕೊಡುತ್ತೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ ‌

ಇದೇ ವೇಳೆ ಸಂಸದ ನಳೀನ್ ಕುಮಾರ್ ಕಟೀಲ್ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಚ್ಚಿನ ಪಾತ್ರ ವಹಿಸಿ
ಕೇಂದ್ರ ಸರ್ಕಾರದಿಂದ ಅನುಮೋದನೆ ಕೊಡಿಸಿದ್ದಾರೆ ಎಂದೂ ಸಚಿವರು ತಿಳಿಸಿದ್ದಾರೆ.

- Advertisement -

Latest News

error: Content is protected !!