Saturday, June 6, 2026
Homeತಾಜಾ ಸುದ್ದಿದೀಪಾವಳಿ ಹಬ್ಬದಂದು ದೇವಸ್ಥಾನಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ದೀಪಾವಳಿ ಹಬ್ಬದಂದು ದೇವಸ್ಥಾನಗಳಲ್ಲಿ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

- Advertisement -
- Advertisement -

ಬೆಂಗಳೂರು: ದೀಪಾವಳಿಯ ಬಲಿ ಪಾಡ್ಯಮಿ ಹಬ್ಬದ ದಿನದಂದು ದೇವಸ್ಥಾನಗಳಲ್ಲಿ ಹೊಸ ಸಂಪ್ರದಾಯಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲು ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಸಚಿವೆ ಶಶಿಕಲಾ ಜೊಲ್ಲೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಇತ್ತೀಚಿನ ದಿನಗಳಲ್ಲಿ ಪಟ್ಟಣ ಮತ್ತು ಮಹಾನಗರಗಳಲ್ಲಿ ಈ ಪದ್ಧತಿ ಮರೆತು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಸನಾತನ ಧರ್ಮದ ಗೋಮಾತೆಯನ್ನು ದೇವತೆ ಎಂದು ತಿಳಿದು ಪೂಜಿಸುವ ಸಂಪ್ರದಾಯವನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಕಳೆದ ವರ್ಷದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. ಇದರಿಂದಾಗಿ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಗೋಪೂಜೆಗೆ ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದರು.

- Advertisement -

Latest News

error: Content is protected !!