Saturday, June 6, 2026
Homeತಾಜಾ ಸುದ್ದಿಮಗನ ಸಾವಿನ ಪ್ರಕರಣವನ್ನು ಮತ್ತೆ ಸಿಬಿಐ ಮೂಲಕ ತನಿಖೆ ಮಾಡಿಸಿ: ಸಿಎಂಗೆ ಪರೇಶ್ ಮೇಸ್ತಾ ತಂದೆ...

ಮಗನ ಸಾವಿನ ಪ್ರಕರಣವನ್ನು ಮತ್ತೆ ಸಿಬಿಐ ಮೂಲಕ ತನಿಖೆ ಮಾಡಿಸಿ: ಸಿಎಂಗೆ ಪರೇಶ್ ಮೇಸ್ತಾ ತಂದೆ ಮನವಿ

- Advertisement -
- Advertisement -

ಬೆಂಗಳೂರು: ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದಷ್ಟೇ ಸಿಬಿಐ ಬಿ ರಿಪೋರ್ಟ್‌ ಸಲ್ಲಿಸಿದ್ದು, ಅದು ಸಹಜ ಸಾವು ಎಂದು ಹೇಳಿದೆ. ಆದ್ರೆ ಮತ್ತೆ ಸಿಬಿಐ ಮೂಲಕ ತನಿಖೆ ಮಾಡಿಸುವಂತೆ ಪರೇಶ್ ಮೆಸ್ತಾ ತಂದೆ ಕಮಾಲಾಕರ್ ಮೇಸ್ತಾ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಭೇಟಿಯಾದ ಕಮಲಾಕರ್ ಮೇಸ್ತಾ, ನನ್ನ ಮಗನ ಸಾವು ಅಸಹಜ ಸಾವಾಗಿದೆ. ನನ್ನ ಮಗ ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿತ್ತು. ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇದೆ. ಹೀಗಾಗಿ ಪ್ರಕರಣವನ್ನು ಸಿಬಿಐ ಮರು ತನಿಖೆಗೆ ಆದೇಶ ನೀಡಬೇಕೆಂದು ಸಿಎಂಗೆ ಮನವಿ ಮಾಡಿದ್ದಾರೆ. 

- Advertisement -

Latest News

error: Content is protected !!