Saturday, June 6, 2026
Homeತಾಜಾ ಸುದ್ದಿಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಗಂಧದ ಗುಡಿ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು: ಮುಂದಿನ ಪೀಳಿಗೆಗೆ ನಿಸರ್ಗದ ಬಗ್ಗೆ ಜಾಗೃತಿ ಮೂಡಿಸಲು ಅದರ ಸಂರಕ್ಷಣೆ ಮಾಡಲು ಪ್ರೇರಣೆ ನೀಡುವ ಗಂಧದ ಗುಡಿ ಚಲನಚಿತ್ರಕ್ಕೆ ಸರ್ಕಾರ ತೆರಿಗೆ ವಿನಾಯ್ತಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಪುನೀತ್ ಪರ್ವ ಗಂಧದ ಗುಡಿ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಬೊಮ್ಮಾಯಿ‌ ಈ ಹೇಳಿಕೆ ನೀಡಿದ್ದಾರೆ.

ಗಂಧದ ಗುಡಿ ಚಲನಚಿತ್ರ ನಿಸರ್ಗ ಮತ್ತು ಅದರ ರಕ್ಷಣೆ ಕುರಿತಾಗಿರುವ ಚಲನಚಿತ್ರವಾಗಿರುವುದರಿಂದ ಇಂದಿನ ಕಾಲದಲ್ಲಿ ನಿಸರ್ಗ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಅವಶ್ಯಕತೆ ಇದೆ ಎಂದು ಸಿಎಂ ಹೇಳಿದ್ದಾರೆ.

ನವೆಂಬರ್ 1 ರಂದು ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಶ್ರೇಷ್ಠ ಪ್ರಶಸ್ತಿಯಾಗಿರುವ ಕರ್ನಾಟಕ ಪ್ರಶಸ್ತಿಯನ್ನು ಸರ್ಕಾರ ನೀಡುತ್ತಿದೆ. ವಿಧಾನಸೌಧದ ಮುಖ್ಯದ್ವಾರ ಮೆಟ್ಟಿಲುಗಳ ಮೇಲೆ ಮರಣೋತ್ತರವಾಗಿ ಕರ್ನಾಟಕ ಪ್ರಶಸ್ತಿ ನೀಡಿ ಗೌರವ ಸಲ್ಲಿಸಲಾಗುತ್ತಿದೆ.

- Advertisement -

Latest News

error: Content is protected !!