Tuesday, June 9, 2026
Homeಕರಾವಳಿಉಡುಪಿಉಡುಪಿ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನ

ಉಡುಪಿ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನ

- Advertisement -
- Advertisement -

ಉಡುಪಿ : ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ  ಬೈಂದೂರಿನಲ್ಲಿ ನಡೆದಿದೆ.  ರಾತ್ರಿ ವೇಳೆ ಬ್ಯಾಂಕ್ ಗೆ ನುಗ್ಗಿದ ಕಳ್ಳರು, ಕಳವಿಗೆ ಯತ್ನಿಸಿದ್ದಾರೆ.

ಬ್ಯಾಂಕಿನ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳಪ್ರವೇಶಿಸಿದ ಕಳ್ಳರು, ಕಿಟಕಿಗಳಿಗೆ ಕಪ್ಪು ಬಣ್ಣದ ಪ್ಲಾಸ್ಟಿಕ್ ಟಾರ್ಪಲನ್ನು ಹಾಕಿ, ವೆಲ್ಡಿಂಗ್ ಮೆಷಿನ್ ನಿಂದ ಲಾಕರ್‌ನ್ನು ತೆರೆಯಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!