Thursday, June 4, 2026
Homeತಾಜಾ ಸುದ್ದಿಮಂಗಳೂರು ವಿಮಾನ ನಿಲ್ದಾಣಕ್ಕೆ ಅ.27ರಿಂದ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭ

ಮಂಗಳೂರು ವಿಮಾನ ನಿಲ್ದಾಣಕ್ಕೆ ಅ.27ರಿಂದ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭ

- Advertisement -
- Advertisement -

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣಕ್ಕೆ ಸರಕಾರಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಬೇಕು ಎಂಬ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರುವ ಕಾಲ ಹತ್ತಿರ ಬಂದಿದೆ. ನಗರದ ಬಿಜೈ ಸರಕಾರಿ ಬಸ್ ನಿಲ್ದಾಣ ಮತ್ತು ಮಣಿಪಾಲದಿಂದ ಬಜ್ಪೆ ಕೆಂಜಾರಿನಲ್ಲಿರುವ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ಕ್ಕೆ ಅ.27ರಿಂದ ಸರಕಾರಿ ವೋಲ್ವೊ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ತಿಳಿದು ಬಂದಿದೆ.

ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಸ್ಟೇಟ್‌ ಬ್ಯಾಂಕ್-ಸೆಂಟ್ರಲ್ ರೈಲು ನಿಲ್ದಾಣ-ಲಾಲ್‌ಬಾಗ್ ಕುಂಟಿಕಾನ- ಕಾವೂರು ಮೂಲಕ ಕೆಂಜಾರಿಗೆ ಬೆಳಗ್ಗೆ 6:30ರಿಂದ ಬಸ್ ಸಂಚರಿಸಲಿದೆ. ಈ ರೂಟ್‌ನ ಪ್ರಯಾಣ ದರ 100 ರೂ. ನಿಗಧಿಪಡಿಸಲಾಗಿದೆ.

- Advertisement -

Latest News

error: Content is protected !!