Thursday, June 4, 2026
Homeಕರಾವಳಿಉಡುಪಿಕಾರ್ಕಳ; ಪಿಯುಸಿ ವಿದ್ಯಾರ್ಥಿನಿ ಅನಾರೋಗ್ಯದಿಂದ‌ ನಿಧನ

ಕಾರ್ಕಳ; ಪಿಯುಸಿ ವಿದ್ಯಾರ್ಥಿನಿ ಅನಾರೋಗ್ಯದಿಂದ‌ ನಿಧನ

- Advertisement -
- Advertisement -

ಕಾರ್ಕಳ: ಪಿಯುಸಿ ವಿದ್ಯಾರ್ಥಿನಿ ಅನಾರೋಗ್ಯದಿಂದ‌ ನಿಧನವಾಗಿರುವ ಘಟನೆ ಗುಂಡೂರಿ‌ ಗ್ರಾಮದಲ್ಲಿ ನಡೆದಿದೆ.

ಗುಂಡೂರಿ ಗ್ರಾಮದ ಅಶೋಕ ನಿವಾಸ ನಿವಾಸಿ, ವೇಣೂರು ಸ.ಪ.ಪೂ. ಕಾಲೇಜು ವಾಣಿಜ್ಯ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿನಿ  ಅಂಕಿತಾ (17) ಮೃತ ದುರ್ದೈವಿ.

ಅಂಕಿತಾ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.ಅಶೋಕ್ ಪೂಜಾರಿ ಮತ್ತು ಪ್ರತಿಮಾ ದಂಪತಿಯ ಪುತ್ರಿಯಾಗಿರುವ ಈಕೆ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಗುಣಮುಖರಾಗದ ಹಿನ್ನೆಲೆ‌ ಅ. 22ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಅಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಂಕಿತಾ ಇಹಲೋಕ ತ್ಯಜಿಸಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ಈಕೆ ತಂದೆ, ತಾಯಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ

- Advertisement -

Latest News

error: Content is protected !!