Friday, June 5, 2026
Homeಕರಾವಳಿಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರ್ಮಿಕ ಸಾವು

ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರ್ಮಿಕ ಸಾವು

- Advertisement -
- Advertisement -

ಮಂಗಳೂರು: ಕಾಂಪೌಂಡ್ ಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಉರ್ವದಲ್ಲಿ ನಡೆದಿದೆ.

ಮಹಾನಗರ ಪಾಲಿಕೆಯ ಚರಂಡಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಮನೆಯೊಂದರ ಆವರಣ ಗೋಡೆ ಕುಸಿದಿದೆ. ಪರಿಣಾಮ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಈರಪ್ಪ ಸಾವನ್ನಪ್ಪಿದ್ದಾರೆ.

ಉರ್ವದ ಬಿ.ನಾರಾಯಣ ನಾಯಕ್ ಎಂಬುವರ ಮನೆಯ ಸಮೀಪ ಒಂದು ವಾರದಿಂದ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆವರಣ ಗೋಡೆ ಕುಸಿಯುವ ಸಾಧ್ಯತೆಯನ್ನು ಮನೆಯ ಮಾಲೀಕರು ಗುತ್ತಿಗೆದಾರರ ಗಮನಕ್ಕೆ ತಂದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿ ಮುಂದುವರಿಸಲಾಗಿತ್ತು ಎನ್ನಲಾಗಿದೆ.

ಗುರುವಾರ ಬೆಳಿಗ್ಗೆ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈರಪ್ಪ ಅವರ ಮೇಲೆ ಗೋಡೆ ಬಿದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!